ಶಿವಮೊಗ್ಗ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ ಯುವಕನ ಮೇಲೆ ಪ್ರಕರಣ ದಾಖಲಾಗಿದ್ದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಇತ್ತೀಚೆಗೆ ಮಾಜಿ ಸಚಿವ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಆಜಾನ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಈ ಹಿನ್ನೆಲೆ ಮಾ.17ರಂದು ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಯುವಕನೊಬ್ಬ ಆಜಾನ್ ಕೂಗಿದ್ದ. ಈ ವಿಡಿಯೋ ವೈರಲ್ ಆಗಿತ್ತು.
ಜಯನಗರ ಠಾಣೆ ಪೊಲೀಸರು ಆತನನ್ನು ಠಾಣೆಗೆ ಕರೆಸಿ ತಿಳಿಹೇಳಿ ಮುಂಜಾಗ್ರತಾ ಕ್ರಮವಾಗಿ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕನಿಗೆ ಸ್ಟೇಷನ್ ಬೇಲ್ ಮೇಲೆ ಮನೆಗೆ ಕಳುಹಿಸಲಾಗಿದೆ. ಘಟನೆ ವೇಳೆ ಹಾಜರಿದ್ದ ವ್ಯಕ್ತಿಗಳ ಪೂರ್ವಾಪರ ಸಂಗ್ರಹಿಸಲಾಗಿದ್ದು, ಮಾಹಿತಿ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಎಸ್‌ಪಿ ಮಿಥುನ್‌ಕುಮಾರ್ ತಿಳಿಸಿದ್ದಾರೆ.