Advertisement
ಈ ಸಂಬಂಧ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಆದೇಶದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರು ಸುತ್ತೋಲೆ ಹೊರಡಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಾಂಗ ಅಧಿಕಾರಿಗಳು ಆಗಸ್ಟ್ 13ರಿಂದ 15ರ ನಡುವೆ ತಮ್ಮ ತಮ್ಮ ಮನೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಚಿವರು ಪತ್ರ ಬರೆದು, ಸ್ವಾತಂತ್ರ್ಯ ಅಮೃತ ಮಹೋತ್ಸವ ಭಾಗವಾಗಿ ಮನೆ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾಜರಿಸುವ ಅಭಿಯಾನದ ಮಾಹಿತಿ ನೀಡಿದ್ದಾರೆ . ಭಾರತೀಯ ತ್ರಿವರ್ಣ ಧ್ವಜವು ರಾಷ್ಟ್ರೀಯ ಹೆಮ್ಮಯ ಸಂಕೇತವಾಗಿದೆ. ಧ್ವಜಕ್ಕೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅನುಷ್ಠಾನ ಸಮಿತಿಯು ಪ್ರತಿ ಭಾರತೀಯ ಪ್ರಜೆ ತನ್ನ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದಕ್ಕೆ ಪ್ರೋತ್ಸಾಹ ನೀಡಲು ಅಮೃತ ಮಹೋತ್ಸವ ಅಡಿಯ “ಹರ್ ಗರ್ ತಿರಂಗಾ’ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಜನರ ಹೃದಯದಲ್ಲಿ ರಾಷ್ಟ್ರಭಕ್ತಿ ಹುಟ್ಟುಹಾಕುವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅವಿರತವಾಗಿ ಕೊಡುಗೆ ನೀಡಿದವರನ್ನು ಸ್ಮರಿಸಿಕೊಳ್ಳುವ ಆಲೋಚನೆ ಈ ಅಭಿಯಾನದ ಹಿಂದಿದೆ. ಹೀಗಾಗಿ, ಆಗಸ್ಟ್ 13ರಿಂದ 15ರ ನಡುವೆ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅಭಿಯಾನದಲ್ಲಿ ನ್ಯಾಯಾಂಗವು ಸಕ್ರಿಯವಾಗಿ ಪಾಲ್ಗೊಂಡರೆ ಜನಮಾನಸದ ಮೇಲೆ ಖಂಡಿತವಾಗಿಯೂ ಪ್ರಭಾವ ಬೀರುತ್ತದೆ ಹಾಗೂ ಅಭಿಯಾನವು ದೊಡ್ಡ ಮಟ್ಟದ ಯಶಸ್ವಿಯಾಗಲು ಸಾಧ್ಯವಾಗುತ್ತದೆ.
Related Articles
Advertisement
ಹಾಗಾಗಿ, ರಾಜ್ಯದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳು ತಮ್ಮ ತಮ್ಮ ಮನೆಯಲ್ಲಿ ಆ.13ರಿಂದ 15ರ ನಡುವೆ ರಾಷ್ಟ್ರ ಧ್ವಜ ಹಾಜರಿಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶಿಸಲಾಗಿದೆ.