Advertisement

ಅಜಾದಿ ಕಾ ಅಮೃತ್‌ ಮಹೋತ್ಸವ: ಹರ್‌ ಘರ್‌ ತಿರಂಗಾ: ಹೈಕೋರ್ಟ್‌ ಸುತ್ತೋಲೆ

08:10 PM Aug 05, 2022 | Team Udayavani |

ಬೆಂಗಳೂರು: “ಅಜಾದಿ ಕಾ ಅಮೃತ್‌ ಮಹೋತ್ಸವ್‌’ ಅಂಗವಾಗಿ ಕೇಂದ್ರ ಸರ್ಕಾರದ “ಹರ್‌ ಘರ್‌ ತಿರಂಗಾ” ಅಭಿಯಾನದ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಾಂಗ ಅಧಿಕಾರಿಗಳ ಮನೆಗಳಲ್ಲಿ ಆಗಸ್ಟ್‌ 13ರಿಂದ 15ರವರೆಗೆ ರಾಷ್ಟ್ರಧ್ವಜ ಹಾರಾಡಲಿದೆ.

Advertisement

ಈ ಸಂಬಂಧ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರ ಆದೇಶದಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಟಿ.ಜಿ. ಶಿವಶಂಕರೇಗೌಡ ಅವರು ಸುತ್ತೋಲೆ ಹೊರಡಿಸಿದ್ದಾರೆ. ಹರ್‌ ಘರ್‌ ತಿರಂಗಾ ಅಭಿಯಾನದ ಭಾಗವಾಗಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಾಂಗ ಅಧಿಕಾರಿಗಳು ಆಗಸ್ಟ್‌ 13ರಿಂದ 15ರ ನಡುವೆ ತಮ್ಮ ತಮ್ಮ ಮನೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸುತ್ತೋಲೆಯಲ್ಲಿ ಏನಿದೆ?
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಚಿವರು ಪತ್ರ ಬರೆದು, ಸ್ವಾತಂತ್ರ್ಯ ಅಮೃತ ಮಹೋತ್ಸವ ಭಾಗವಾಗಿ ಮನೆ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾಜರಿಸುವ ಅಭಿಯಾನದ ಮಾಹಿತಿ ನೀಡಿದ್ದಾರೆ . ಭಾರತೀಯ ತ್ರಿವರ್ಣ ಧ್ವಜವು ರಾಷ್ಟ್ರೀಯ ಹೆಮ್ಮಯ ಸಂಕೇತವಾಗಿದೆ. ಧ್ವಜಕ್ಕೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅನುಷ್ಠಾನ ಸಮಿತಿಯು ಪ್ರತಿ ಭಾರತೀಯ ಪ್ರಜೆ ತನ್ನ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದಕ್ಕೆ ಪ್ರೋತ್ಸಾಹ ನೀಡಲು ಅಮೃತ ಮಹೋತ್ಸವ ಅಡಿಯ “ಹರ್‌ ಗರ್‌ ತಿರಂಗಾ’ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಜನರ ಹೃದಯದಲ್ಲಿ ರಾಷ್ಟ್ರಭಕ್ತಿ ಹುಟ್ಟುಹಾಕುವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅವಿರತವಾಗಿ ಕೊಡುಗೆ ನೀಡಿದವರನ್ನು ಸ್ಮರಿಸಿಕೊಳ್ಳುವ ಆಲೋಚನೆ ಈ ಅಭಿಯಾನದ ಹಿಂದಿದೆ. ಹೀಗಾಗಿ, ಆಗಸ್ಟ್‌ 13ರಿಂದ 15ರ ನಡುವೆ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅಭಿಯಾನದಲ್ಲಿ ನ್ಯಾಯಾಂಗವು ಸಕ್ರಿಯವಾಗಿ ಪಾಲ್ಗೊಂಡರೆ ಜನಮಾನಸದ ಮೇಲೆ ಖಂಡಿತವಾಗಿಯೂ ಪ್ರಭಾವ ಬೀರುತ್ತದೆ ಹಾಗೂ ಅಭಿಯಾನವು ದೊಡ್ಡ ಮಟ್ಟದ ಯಶಸ್ವಿಯಾಗಲು ಸಾಧ್ಯವಾಗುತ್ತದೆ.

ಆದ್ದರಿಂದ ಹೈಕೋರ್ಟ್‌ ಹಾಗೂ ಎಲ್ಲಾ ವಿಚಾರಣಾ ನ್ಯಾಯಾಲಯಗಳಲ್ಲಿ, ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆಯಲ್ಲಿ ತಿರಂಗಾ ಹಾರಿಸಲು ಪ್ರೋತ್ಸಾಹ ನೀಡುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕೇಂದ್ರ ಕಾನೂನು ಸಚಿವರು ಕೋರಿದ್ದಾರೆ.

Advertisement

ಹಾಗಾಗಿ, ರಾಜ್ಯದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳು ತಮ್ಮ ತಮ್ಮ ಮನೆಯಲ್ಲಿ ಆ.13ರಿಂದ 15ರ ನಡುವೆ ರಾಷ್ಟ್ರ ಧ್ವಜ ಹಾಜರಿಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next