Advertisement
ಬಾಕು:ಅಜರ್ಬೈಜಾನ್ ದೇಶದ ರಾಜಧಾನಿ ಬಾಕು. ಅಜರ್ಬೈಜಾನ್‌ನಲ್ಲಿ ನೋಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. ಈ ನಗರವು ಕ್ಯಾಸ್ಪಿಯನ್ ಸಮುದ್ರ(Icherishehe) ಹಾಗೂ ಕಾಕಸಸ್ ಪರ್ವತ ಪ್ರದೇಶದ ಅತ್ಯಂತ ದೊಡ್ಡ ನಗರವೂ ಹೌದು. ಇಲ್ಲಿಯ ಜನಸಂಖ್ಯೆ ಅಂದಾಜು 20 ಲಕ್ಷ. ಈ ನಗರವು ದೇಶದ ಅತೀದೊಡ್ಡ ನಗರವಾಗಿದ್ದು ವಾಣಿಜ್ಯ ಮತ್ತು ವಿದ್ಯಾಕೇಂದ್ರವಾಗಿದೆ, ಆಧುನಿಕತೆಯನ್ನು ಒಪ್ಪಿಕೊಂಡಿರುವ ಈ ನಗರ, ಯುರೋಪಿನ ನಗರಗಳನ್ನ ಹೋಲುತ್ತದೆ.
Related Articles
ಬಾಕುವಿನ ನೈಋತ್ಯಕ್ಕೆ ಸುಮಾರು 64 ಕಿ.ಮೀ. ದೂರದಲ್ಲಿರುವ ಈ ರಾಷ್ಟ್ರೀಯ ಉದ್ಯಾನವನವು ತನ್ನ ಶಿಲಾಯುಗದ ಕಲ್ಲಿನ ಕೆತ್ತನೆಗಳು ಮತ್ತು ಮಣ್ಣಿನ ಜ್ವಾಲಾಮುಖಿಗಳಿಗೆ ಹೆಸರುವಾಸಿಯಾಗಿದೆ.
Advertisement
*ಪೆಟ್ರೋಗ್ಲಿಫ್ಸ್: 10,000 B.C ವರೆಗಿನ 6,000ಕ್ಕೂ ಹೆಚ್ಚು ಕಲ್ಲಿನ ಕೆತ್ತನೆಗಳು ಪ್ರಾಚೀನ ಮಾನವ ಜೀವನ ಮತ್ತು ವನ್ಯಜೀವಿಗಳ ಚಿತ್ರಣಗಳನ್ನು ಒಳಗೊಂಡಿವೆ.
*ಮಡ್ ಜ್ವಾಲಾಮುಖಿಗಳು: ಅಜರ್ಬೈಜಾನ್ ಪ್ರಪಂಚದಲ್ಲೇ ಅತೀ ಹೆಚ್ಚು ಮಣ್ಣಿನ ಜ್ವಾಲಾಮುಖಿಗಳನ್ನು ಹೊಂದಿದೆ, ಇದು ಅನನ್ಯ ಭೌಗೋಳಿಕ ಅನುಭವವನ್ನು ನೀಡುತ್ತದೆ.
ಶೆಕಿ (Sheki):ಗ್ರೇಟರ್‌ಕಾಕಸಸ್ ಪರ್ವತಗಳ ತಪ್ಪಲಿನಲ್ಲಿ ನೆಲೆಗೊಂಡಿರುವ ಒಂದು ಆಕರ್ಷಕ ಪಟ್ಟಣ, ಶ್ರೀಮಂತ ಇತಿಹಾಸ ಮತ್ತು ಸುಂದರವಾದ ವಾಸ್ತುಶಿಲ್ಪಕ್ಕೆ ಈ ಪ್ರಾಂತ ಹೆಸರುವಾಸಿಯಾಗಿದೆ. ಇಲ್ಲಿರುವ ಶೆಕಿಖಾನ್ ಅರಮನೆ ಸಂಕೀರ್ಣವಾದ ಬಣ್ಣದ ಗಾಜು ಮತ್ತು ಟೈಲ್ ಕೆಲಸದಿಂದ ಅಲಂಕರಿಸಲ್ಪಟ್ಟ 18ನೇ ಶತಮಾನದ ಅದ್ಭುತ ಅರಮನೆ. ಸಾಮಾನ್ಯವಾಗಿ ಪುರಾತನ ನಗರಗಳಲ್ಲಿ, ಸ್ಥಳೀಯ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಸಾಮಾನ್ಯವಾಗಿರುತ್ತದೆ. ಇಲ್ಲಿ ಸಾಂಪ್ರದಾಯಿಕ ಜವಳಿ, ಕುಂಬಾರಿಕೆ ಮತ್ತು ತಾಮ್ರದ ಸಾಮಾನುಗಳನ್ನು ಉತ್ಪಾದಿಸುವುದನ್ನ ಕಾಣಬಹುದು.
ಅಜರ್ಬೈಜಾನ್‌ನ ಎರಡನೇ ಅತೀ ದೊಡ್ಡ ನಗರ, ಪುರಾತನ ಇತಿಹಾಸ ಮತ್ತು ಸಂಸ್ಕೃತಿಯನ್ನು ಇಲ್ಲಿ ನೋಡಬಹುದು. ಪ್ರಸಿದ್ಧ ಪರ್ಷಿಯನ್ ಕವಿ ನಿಜಾಮಿ ಗಂಜಾವಿಗೆ ಸಮರ್ಪಿತವಾಗಿರುವ ನಿಜಾಮಿ ಸಮಾಧಿ (Nizami Mausoleum) ಇಲ್ಲಿದೆ. ಈ ಸಮಾಧಿಯು ಸುಂದರ ವಾಸ್ತುಶಿಲ್ಪವನ್ನು ಹೊಂದಿದೆ. ಈ ನಗರದಲ್ಲಿರುವ ಜಾವದ್ ಖಾನ್ ಸ್ಟ್ರೀಟ್ (Javad Khan Street) ನಲ್ಲಿ ಕೆಫೆಗಳು, ಅಂಗಡಿಗಳು ಮತ್ತು ಐತಿಹಾಸಿಕ ತಾಣಗಳಿವೆ. ಸ್ಥಳೀಯ ಸಂಸ್ಕೃತಿಯಲ್ಲಿ ಅಡ್ಡಾಡಲು ಮತ್ತು ಅರಿತುಕೊಳ್ಳಲು ಈ ಜಾಗ ಸೂಕ್ತವಾಗಿದೆ. ಕುಬಾ (Quba):
ಅಜರ್ಬೈಜಾನ್‌ನ ಉತ್ತರ ಭಾಗದಲ್ಲಿರುವ ಒಂದು ಸುಂದರವಾದ ಪಟ್ಟಣ. ಇಲ್ಲಿ ಸುಂದರವಾದ ನಯನ ಮನೋಹರವಾದ ಪ್ರಕೃತಿ ಮತ್ತು ಸಾಂಸ್ಕೃತಿಕ ಮಹತ್ವಕ್ಕೆ ಹೆಸರುವಾಸಿಯಾಗಿದೆ. ಇಸ್ಲಾಮಿಕ್ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ಸುಂದರವಾದ ಕುಬಾ ಮಸೀದಿ, ಪಟ್ಟಣದ ಕೇಂದ್ರ ಭಾಗದಲ್ಲಿದೆ. 1918ರ ನರಮೇಧದ ಬಲಿಯಾದವರ ನೆನಪಿಗಾಗಿ ನಿರ್ಮಿಸಲಾಗಿರುವ ಕುಬಾ ಜಿನೊಸೈಡ್ ಮೆಮೋರಿಯಲ್ ಸ್ಮಾರಕ ಸಂಕೀರ್ಣ (Quba Genocide Memorial Complex) ವನ್ನು ಕಾಣಬಹುದು. ಐತಿಹಾಸಿಕ ಮಹತ್ವದ ವಿಷಯಗಳ ಕುರಿತು ಆಸಕ್ತಿಯಿರುವವರು ಈ ಸ್ಮಾರಕಕ್ಕೆ ಭೇಟಿ ನೀಡುತ್ತಾರೆ. ಗಬಾಲಾ (Gabala):
ನೈಸರ್ಗಿಕ ಸೌಂದರ್ಯ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಹೆಸರುವಾಸಿಯಾದ ಜನಪ್ರಿಯ ರೆಸಾರ್ಟ್ ಪ್ರದೇಶ, ಬಾಕುದಿಂದ ಸುಮಾರು 225 ಕಿ.ಮೀ. ವಾಯುವ್ಯದಲ್ಲಿದೆ. ಟುಫಾಂಡಗ್ ಮೌಂಟೇನ್ ರೆಸಾರ್ಟ್ Tufandag Mountain Resor) ನಲ್ಲಿ ಚಳಿಗಾಲದ ಸಮಯದಲ್ಲಿ ಸ್ಕೀಯಿಂಗ್ ಕ್ರೀಡೆಯನ್ನಾಡಬಹುದು ಮತ್ತು ಬೇಸಗೆಯಲ್ಲಿ ಹೈಕಿಂಗ್ ಮಾಡುವುದಕ್ಕೆ ಸೂಕ್ತ ಪ್ರದೇಶ, ಇಲ್ಲಿರುವ ಪರ್ವತಗಳ ಅದ್ಭುತ ನೋಟವನ್ನು ಸವಿಯುವುದೇ ಒಂದು ಖುಷಿ. ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೀಯ ಸ್ಥಳ ಗಬಾಲಾ ಶೂಟಿಂಗ್ ಕ್ಲಬ್, ಇಲ್ಲಿ ಶೂಟಿಂಗ್ ಕ್ರೀಡೆಗಳನ್ನಾಡಲು ಆಧುನಿಕ ಸೌಲಭ್ಯಗಳನ್ನ ರೂಪಿಸಲಾಗಿದೆ.
ಬಾಕುವಿನ ಪಶ್ಚಿಮಕ್ಕೆ ಸುಮಾರು 300 ಕಿ.ಮೀ. ದೂರದಲ್ಲಿರುವ ಚಿಕಿತ್ಸಕ ತೈಲ ಸ್ನಾನಗಳಿಗೆ ಪ್ರಸಿದ್ಧವಾದ ವಿಶಿಷ್ಟ ಸ್ಪಾ ಪಟ್ಟಣ. ನಮ್ಮ ಕೇರಳದ ಆಯುರ್ವೇದ ತೈಲ ಮಸಾಜ್‌ನಂತೆ ಇಲ್ಲಿನ ಅನೇಕ ರೆಸಾರ್ಟ್‌ಗಳಲ್ಲಿ ವಿಶೇಷವಾಗಿ ಚರ್ಮ ಮತ್ತು ಕೀಲು ಸಮಸ್ಯೆಗಳಿಗೆ ನಫ್ತಾಲನ್ ಆಯಿಲ್ ಟ್ರೀಟ್‌ಮೆಂಟ್ ನೀಡಲಾಗುತ್ತದೆ. ಖಿನಾಲುಗ್ (Khinalug):
2,300 ಮೀಟರ್ ಎತ್ತರದಲ್ಲಿರುವ ಅಜರ್ಬೈಜಾನ್‌ನ ಅತೀ ಎತ್ತರದ ಮತ್ತು ಅತ್ಯಂತ ದೂರದ ಪರ್ವತ ಹಳ್ಳಿಗಳಲ್ಲಿ ಒಂದಾಗಿದೆ. ಹಳ್ಳಿಯು ಸುತ್ತಮುತ್ತಲಿನ ಪರ್ವತಗಳು ಮತ್ತು ಕಣಿವೆಗಳ ರಮಣೀಯ ದೃಶ್ಯಗಳು ಕಣ್ಮನ ಸೆಳೆಯುತ್ತವೆ. ಪ್ರವಾಸಿಗರು ಸ್ಥಳೀಯ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆತಿಥ್ಯದ ಅನುಭವವನ್ನು ಪಡೆಯಬಹುದು. ಲಾಹಿಜ್ (Lahi):
ಕುಶಲಕರ್ಮಿಗಳ ಕರಕುಶಲತೆಗೆ ಹೆಸರುವಾಸಿಯಾದ ಐತಿಹಾಸಿಕ ಪರ್ವತ ಗ್ರಾಮ, ವಿಶೇಷವಾಗಿ ಕರಕುಶಲತೆ ರೂಪಿಸುವ ತಾಮ್ರದ ಸಾಮಾನುಗಳನ್ನು ಇಲ್ಲಿ ನೋಡಬಹುದು. ಸ್ಥಳೀಯ ಕುಶಲಕರ್ಮಿಗಳು ತಮ್ಮ ಕೈಯಾರೆ ಸುಂದರವಾಗಿ ವಸ್ತುಗಳನ್ನು ಉತ್ಪಾದಿಸುವುದನ್ನ ಇಲ್ಲಿ ವೀಕ್ಷಿಸಬಹುದು. ಗ್ರಾಮವು ಸಾಂಪ್ರದಾಯಿಕ ವಾಸ್ತುಶೈಲಿ ಮತ್ತು ಸ್ಥಳೀಯ ಕಲ್ಲಿನಿಂದ ನಿರ್ಮಿಸಲಾದ ಅನನ್ಯ ಮನೆಗಳನ್ನು ಒಳಗೊಂಡಿದೆ. ಗ್ರಾಮದ ಬೀದಿಗಳು ಸಹ ಅಷ್ಟೇ ಸುಂದರವಾಗಿವೆ.
ಈ ಸಮುದ್ರ ಮಿಕ್ಕ ಸಮುದ್ರಗಳಂತಲ್ಲ. ಇದು ಒಳನಾಡಿನ ಜಲರಾಶಿ ಅಥವಾ ಒಳನಾಡಿನ ಜಲದ್ವೀಪ ಎನ್ನಬಹುದು. ಈ ಸಮುದ್ರದ ಸುತ್ತಲೂ ಭೂ ಪ್ರದೇಶವಿದೆ. ಈ ಸಮುದ್ರ ಮಿಕ್ಕ ಸಮುದ್ರಗಳಂತೆ ಒಂದನ್ನೊಂದು ಸೇರುವುದಿಲ್ಲ. ಸುಂದರವಾದ ಕಡಲತೀರಗಳು, ಕರಾವಳಿಯುದ್ದಕ್ಕೂ ವಿವಿಧ ರೆಸಾರ್ಟ್‌ಗಳು ಬೀಚ್ ಪ್ರೇಮಿಗಳು ಮತ್ತು ಜಲ ಕ್ರೀಡೆಗಳ ಉತ್ಸಾಹಿಗಳಿಗೆ ಕೈಬೀಸಿ ಕರೆಯುತ್ತವೆ.