ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಷ್ಟ್ರ ಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದಿದ್ದಾರೆ ಎಂದು ಕಾಂಗ್ರೆಸ್ ಮಾಡಿರುವ ಆರೋಪ ಈಗ ತಿರುವು ಮುರುವಾಗಿದೆ.
ತಾವು ರಾಷ್ಟ್ರ ಧ್ವಜ ಹಿಡಿದು ಪಾದಯಾತ್ರೆ ಮಾಡುತ್ತಿರುವುದು ಹಾಗೂ ಅದಕ್ಕೆ ಸಂಬಂಧಪಟ್ಟಂತೆ ಪ್ರಕಟವಾಗಿರುವ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸಿನ ಸುಳ್ಳು ಹಾಗೂ ಅಪಪ್ರಚಾರದ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ತಿದ್ದುವ ಕೆಲಸ ಮಾಡಬೇಕೆ ಹೊರತು ಅವಮಾನ ಮಾಡುವುದಲ್ಲ: ಹೈಕೋ
ತಿಪಟೂರಿನಲ್ಲಿ ಬಿ.ಸಿ.ನಾಗೇಶ್ ತಿರಂಗಾ ಯಾತ್ರೆ ನಡೆಸುವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಸಂಬಂಧ ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಎಚ್.ಸಿ.ಮಹಾದೇವಪ್ಪ ಮೊದಲಾದವರು ಟ್ವೀಟ್ ಮಾಡಿ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿದ್ದರು. ಆದರೆ ಖುದ್ದು ನಾಗೇಶ್ ಅವರೇ ಟ್ವೀಟ್ ಮಾಡಿ ಕಾಂಗ್ರೆಸಿಗರ ಆರೋಪದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ಧ್ವಜದ ಬಣ್ಣ ತಿಳಿಯದೇ ಇರುವವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.