Advertisement
ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ದತಿಯ ವಿಸ್ತರಣೆ ಹಾಗೂ ಜನಪ್ರೀಯ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ ಯೋಜನೆಯಡಿ ರೂ 7234 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಕೃಷಿ ಮೂಲಭೂತಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೋಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ . 3 ಸಹಾಯಧನ ನೀಡಲಾಗುವುದು . ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ ( AIF ) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಸಚಿವರು ವಿವರಿಸಿದರು.
Related Articles
Advertisement
ಬೆಳೆ ಸಮೀಕ್ಷೆ ವಿವರ:
2021-22ನೇ ಸಾಲಿನಲ್ಲಿ ಸುಮಾರು 25677 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಗುರಿಯಿದ್ದು , ಅಕ್ಟೋಬರ್ 1ರವರೆಗೆ ಒಟ್ಟು 22805 ತಾಕುಗಳಲ್ಲಿ ಶೇ . 88.81 ರಷ್ಟು ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮುಗಳು ಒಳಗೊಂಡಂತೆ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.
ಬೆಳೆ ವಿಮೆ :
2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಒಟ್ಟು 1280 ಲಕ್ಷ ರೈತರು ಬೆಳೆ ಎಮಗೆ ನೋಂದಾಯಿಸಿದ್ದು,ಒಟ್ಟು 36 ಬೆಳೆಗಳನ್ನು ಅಧಿಸೂಚಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ :
ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ರೈತರ ಮಕ್ಕಳಿಗೆ ಅನುಕೂಲ ಕಲ್ಪಿಸಲು ಮುಖ್ಯಮಂತ್ರಿಗಳ ರೈತವಿದ್ಯಾನಿಧಿ ಯೋಜನೆಯಡಿ ಇದುವರೆಗೂ 8931 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ರೂ . 2.44 ಕೋಟಿ ವರ್ಗಾಯಿಸಲಾಗಿದೆ.
ರಾಜ್ಯದಲ್ಲಿ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ
2020-21ರ ಸಾಲಿನ ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದಾರೆ ಶೇಕಡಾ 2 ರಷ್ಟು ರಾಜ್ಯದ ಸರಾಸರಿಗೆ ಹೋಲಿಸಿದರೆ ಶೇಕಡಾ 10 ರಷ್ಟು ಹೆಚ್ಚಿನ ಉತ್ಪಾದನೆಯಾಗಿರುತ್ತದೆ.
2021 ಮುಂಗಾರು ಹಂಗಾಮಿನಲ್ಲಿ 77.00 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಬಿತ್ತನೆ ಗುರಿ ಇದ್ದು 77.20 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಬಿತ್ತನೆ ಮಾಡುವ ಮೂಲಕ ಶೇಕಡಾ 100.26 ರಷ್ಟು ಸಾಧನೆ ಮಾಡಲಾಗಿದೆ.ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಸೇರಿದಂತೆ ರಾಜ್ಯದಲ್ಲಿ ಒಟ್ಟು 2647000 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 3541606 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿ 2834226 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಕತ್ರಿ, ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಇಲಾಖಾ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು.