ಅಭ್ಯರ್ಥಿಗಳು ಚಲನ್ ಅನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ನಿಗದಿತ ಶುಲ್ಕವನ್ನು ಎಸ್‌ಬಿಐನಲ್ಲಿ ಪಾವತಿಸಿ, ಡಿ. 30ರಿಂದ ಜ. 3ರೊಳಗೆ ಶುಲ್ಕ ಪಾವತಿಸಿದ ಚಲನ್ ಪ್ರತಿಯೊಂದಿಗೆ ಉಡುಪಿ ಡಯಟ್‌ನ ನೋಡೆಲ್ ಕೇಂದ್ರಕ್ಕೆ ಸಲ್ಲಿಸಿ ಪ್ರವೇಶ ಪತ್ರ ಪಡೆಯಬಹುದು.
Advertisement
ಗೈರು ಹಾಜರಾದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಜ. 2ರಿಂದ 6ರ ವರೆಗೆ ನೋಡೆಲ್ ಕೇಂದ್ರದಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಡಯಟ್ ಉಡುಪಿ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಪ್ರವೀಣಾ ಕುಮಾರಿ (9481211471) ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.