Advertisement

ಕಾಂಗ್ರೆಸ್‌ ಅಭ್ಯರ್ಥಿಗಳಿಗೆ “ಬಿ’ಫಾರಂ ವಿತರಣೆ

11:31 PM Apr 28, 2019 | Lakshmi GovindaRaju |

ಬೆಂಗಳೂರು: ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಭಾನುವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ “ಬಿ’ ಫಾರಂ ವಿತರಿಸಿದರು. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿಯೇ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಸುಭಾಸ್‌ ರಾಠೊಡ್‌ ಅವರಿಗೆ “ಬಿ’ ಫಾರಂ ವಿತರಿಸಲಾಯಿತು.

Advertisement

ಕುಂದಗೋಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ನಾಮಪತ್ರವನ್ನು ಕುಂದಗೋಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಗದೀಶ್‌ ಅವರಿಗೆ ನೀಡಲಾಯಿತು. ಸೋಮವಾರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ಜತೆ ರಾಜ್ಯ ನಾಯಕರು ಹಾಜರಿರಲಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಅಕ್ಕ ಪಕ್ಕದ ಐದಾರು ಜಿಲ್ಲೆಗಳಿಂದ ಕಾರ್ಯಕರ್ತರನ್ನು ಸೇರಿಸಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next