Advertisement
ಮಂಗಳೂರು ಕೋಮುವಾದ ಲ್ಯಾಬ್: ಸಿದ್ದರಾಮಯ್ಯಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ. ಕೋಮುವಾದ ಹುಟ್ಟುವ ಲ್ಯಾಬ್ ಮಂಗಳೂರು. ಕೋಮುವಾದಿ ಬಿಜೆಪಿಯನ್ನು ಬೇರು ಸಹಿತ ಕಿತ್ತೆಸೆವ ಕೆಲಸ ಇಲ್ಲಿಂದಲೇ ಆಗಬೇಕಾಗಿದೆ ಎಂದು ವಿಧಾನಸಭಾ ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
Related Articles
Advertisement
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ ಜೆ.ಆರ್. ಲೋಬೋ, ಮೊದಿನ್ ಬಾವಾ, ಕೋಡಿಜಾಲ್ ಇಬ್ರಾಹಿಂ, ಐವನ್ ಡಿ’ಸೋಜಾ, ಕಣಚೂರು ಮೋನು, ಲಿಖೀತ್‌ರಾಜ್ ಮೌರ್ಯ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮುಖಂಡರಾದ ಮಿಥುನ್ ರೈ, ಹರ್ಷರಾಜ್ ಮುದ್ಯ, ಮಹಮ್ಮದ್ ಮೋನು, ಇನಾಯತ್ ಆಲಿ,ರಕ್ಷಿತ್ ಶಿವರಾಂ, ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ರಾಕೇಶ್ ಮಲ್ಲಿ, ಅಶ್ವಿನ್ ಕುಮಾರ್ ರೈ, ಹರೇಕಳ ಗ್ರಾ.ಪಂ. ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ, ತಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ಹರೇಕಳ ಗ್ರಾಮ ಸಮಿತಿ ಅಧ್ಯಕ್ಷ ಬಶೀರ್ ಉಂಬುದ ಮೊದ ಲಾದವರು ಉಪಸ್ಥಿತರಿದ್ದರು.
ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಸ್ವಾಗತಿಸಿದರು. ಶಾಸಕ ಯು.ಟಿ. ಖಾದರ್ ಪ್ರಸ್ತಾವನೆಗೈದರು. ತಾ.ಪಂ. ಮಾಜಿ ಸದಸ್ಯ ಮುಸ್ತಫಾ ಮಲಾರ್ ಹಾಗೂ ಅಬ್ದುಲ್ ರಝಾಕ್ ಕುಕ್ಕಾಜೆ ನಿರೂಪಿಸಿದರು.