Advertisement
ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಸುದ್ದಿಗಾರರೊಂದಿಗೆ ಮಾತನಾಡಿ,” ನನ್ನ ಸಾಮಾಜಿಕ ನ್ಯಾಯಕ್ಕೂ, ಅಹಿಂದಕ್ಕೂ ಬಹಳ ವ್ಯತ್ಯಾಸವಿದೆ. ನಾನು ಅಹಿಂದ ಎಂದು ಯೋಚನೆ ಮಾಡುವವನಲ್ಲ.ನಾನು ಯೋಚನೆ ಮಾಡತಕ್ಕಂತಹದ್ದು ಪ್ರತಿಯೊಬ್ಬರಿಗೂ ಸಹ ಸಮಾನವಾದ ಅವಕಾಶಗಳು, ಸಮಾನವಾದ ಹಕ್ಕು. ಕಾಂಗ್ರೆಸ್ ಪಕ್ಷದ ಸಿದ್ದಾಂತ ಏನಿದೆ, ಸರ್ವ ಧರ್ಮ ಸಮನ್ವಯ ಸಮಭಾವ ಅದರಲ್ಲಿ ನಂಬಿಕೆ ಇಟ್ಟುಕೊಂಡವನು. ಯಾವುದೇ ಬೇಧ ಭಾವ ಇಲ್ಲ. ದೊಡ್ಡವರು-ಸಣ್ಣವರು ಇಲ್ಲ, ಎಲ್ಲರೂ ಸಹ ಒಂದೆ” ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರ ಹಾಕಿದರು.
Related Articles
Advertisement
ಬಿಜೆಪಿಯವರು 36% ಮತದಲ್ಲೇ ಉಳಿದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡು ಒಕ್ಕಲಿಗ ಸಮುದಾಯದ ಮತ ಪ್ರಮಾಣ ಕಾಂಗ್ರೆಸ್ ಗೆ ಬಂದಿದೆ ಎಂದರು.
ಗ್ಯಾರಂಟಿ ಜಾರಿ ಮಾಡಲು ಎಪಿಎಂಸಿ ಮಾರುಕಟ್ಟೆ ಅಲ್ಲ, ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿ ಅನುಷ್ಠಾನಕ್ಕೆ ತರಲು ಸಮಯ ಹಿಡಿಯುತ್ತದೆ ಎಂದರು.
ನಾವು ಲೋಕಸಭಾ ಚುನಾವಣೆಯಲ್ಲಿ ನಮ್ಮ ಗುರಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವುದು ನಮ್ಮ ಗುರಿಯಾಗಿದೆ. ಹೊಸ ಸಂಸದ್ ಭವನದ ಉದ್ಘಾಟನೆಯ ವೇಳೆ ಸೆಂಗೋಲ್ ಅನ್ನುವುದನ್ನು ತಂದಿದ್ದಾರೆ. ಅದು ಸರ್ವಾಧಿಕಾರವನ್ನು ಸೂಚಿಸುತ್ತದೆ ಎಂದರು.