ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಸಿಇಓ ಆಗಿ ಉತ್ತಮವಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರನ್ನು ರಾಜ್ಯ ಸರ್ಕಾರ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಜಿನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನಗಳಿಸಿದರಲ್ಲದೆ ಇದೇ ಯೋಜನೆಯ ಮೂಲಕ ಜಿಲ್ಲೆಯ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃಧ್ಧಿಗೊಳಿಸಿ ಐಎಎಸ್ ಅಧಿಕಾರಿಯಾದರು ಸಹ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನವನ್ನು ಪಡೆಯಲು ವಿಶೇಷ ಶ್ರಮವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂರ್ತಜಲಮಟ್ಟವನ್ನು ವೃಧ್ಧಿಗೊಳಿಸಲು ಮಜಿನರೇಗಾ ಯೋಜನೆಯಡಿ ಬಹುಕಮಾನ್ ಚೆಕ್‍ಡ್ಯಾಂಗಳು,ಕೆರೆ-ಕುಂಟೆಗಳನ್ನು ಪುನಶ್ಚೇತನಗೊಳಿಸಿ ಮಳೆ ನೀರನ್ನು ಸಂರಕ್ಷಣೆ ಮಾಡಲು ಮಳೆನೀರು ಕೊಯ್ಲು ಪದ್ದತಿಯನ್ನು ಗ್ರಾಮ ಪಂಚಾಯಿತಿ,ಸರ್ಕಾರಿ ಶಾಲೆ ಮತ್ತು ಕಚೇರಿಗಳಲ್ಲಿ ಅಳವಡಿಸಿ ಜಲದ ಮಹತ್ವದ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಘನ ತ್ಯಾಜ್ಯ ವಿಲೇವಾರಿ ಘಟಕಗಳು-ರೈತರಿಗಾಗಿ ಕೃಷಿ ಹೊಂಡ,ನಾಲಾ ಬದುಗಳು ಮತ್ತು ಬಚ್ಚಲುಗುಂಡಿ ಸಹಿತ ಅನೇಕ ಅಭಿವೃಧ್ಧಿ ಕಾಮಗಾರಿಗಳನ್ನು ನಡೆಸಿದ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರನ್ನು ಸರ್ಕಾರ ಕೊನೆಗೂ ತೋಟಗಾರಿಕೆ ಇಲಾಖೆಗೆ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃಧ್ಧಿಗಾಗಿ ವಿಶೇಷವಾಗಿ ಶ್ರಮವಹಿಸಿ ಜಿಲ್ಲೆಯಲ್ಲಿ ಅಲ್ಪ ಅವಧಿಯಲ್ಲಿ ಚಿರಪರಿಚಿತರಾದ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ನೇಮಕ ಮಾಡಿರುವ ಸುಧ್ಧಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರಿಗೆ ನೂತನ ಹುದ್ದೆ ನೀಡಿರುವುದಕ್ಕೆ ಅಭಿನಂದಿಸಿ ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರ ಮತ್ತಷ್ಟು ಅಭಿವೃಧ್ಧಿ ಹೊಂದಲಿ ಎಂದು ನಾಗರಿಕರು ಶುಭಹಾರೈಸಿದ್ದಾರೆ.