Advertisement
ಬೆಂಗಳೂರಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದೇವದುರ್ಗಕ್ಕೆ ಹೋಗಿದ್ದು ನಿಜ. ಶರಣ ಗೌಡರ ಜೊತೆ ಮಾತನಾಡಿದ್ದು ನಿಜ. ಆಡಿಯೋದಲ್ಲಿರುವುದು ನನ್ನದೇ ಧ್ವನಿ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಕುತಂತ್ರದ ರಾಜಕಾರಣ ಮಾಡಿದ್ದಾರೆ. ಅವರಿಗೆ ಬೇಕಾದ ಆಡಿಯೋವನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದರು.
ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಡಿರುವ ‘ಸೂಟ್ ಕೇಸ್ ಸಂಸ್ಕೃತಿ’ ಆರೋಪಕ್ಕೆ ಉತ್ತರಿಸಿದ ಯಡಿಯೂರಪ್ಪ, ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ನಾನು ಯಾವುದೇ ತನಿಖೆಗೂ ಸಿದ್ದ ಎಂದರು.