ಮಂಗಳೂರು: ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ. ಸೋಮಣ್ಣ ಅವರು ದೆಹಲಿಗೆ ವೈಯಕ್ತಿಕ ಕಾರಣದಿಂದ ಹೋಗಿದ್ದಾರೆ. ಸೋಮಣ್ಣ ಅವರಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಎಲ್ಲರಿಗಿಂತ ಎತ್ತರದ ಲೀಡರ್. ಸೋಮಣ್ಣ ಅವರಿಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದರು.
ಹಿರಿಯರಿಗೆ ಟಿಕೆಟ್ ನೀಡುವ ವಿಚಾರವಾಗಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದರು.
ಇದನ್ನೂ ಓದಿ:ಮಾ.24ಕ್ಕೆ ರಾಯಚೂರಿಗೆ ಅಮಿತ್ ಶಾ ಭೇಟಿ; 4100 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ
ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ವಿಚಾರವಾಗಿ ಮಾತನಾಡಿದ ಅವರು, ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀಳುತ್ತದೆ. ಬೆಂಕಿ ನಂದಿಸುವ ಕ್ರಮ ಕೈಗೊಳ್ಳಲಾಗಿದೆ. ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಡಿಸಿ ಜೊತೆ ಸಭೆಯನ್ನು ಮಾಡಿದ್ದೇವೆ. ಸಾಂಪ್ರದಾಯಿಕ ಕಾರಣದಿಂದ ಅಲ್ಲಲ್ಲಿ ಬೆಂಕಿ ಬೀಳುತ್ತಿದೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳಯತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಕೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.