Advertisement

ಸರ್ಕಾರ ರಚನೆ ಮಾಡದೇ ಇರುವುದಕ್ಕೆ ನಾವೇನು ಸನ್ಯಾಸಿಗಳಾ?: ಬಿಎಸ್ ವೈ

09:25 AM Jul 02, 2019 | Team Udayavani |

ಬೆಂಗಳೂರು: ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಬಿಜೆಪಿ ನಾಯಕ ಯಡಿಯೂರಪ್ಪನವರು ಸರ್ಕಾರ ರಚನೆಯ ಬಗ್ಗೆ ಸುಳಿವು ನೀಡಿದ್ದಾರೆ.

Advertisement

ವಿಧಾನಸಭೆಯಲ್ಲಿ ಸೋಮವಾರ ದಿಢೀರ್ ಸುದ್ದಿಗೋಷ್ಠಿ ಕರೆದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ಆನಂದ್ ಸಿಂಗ್ ರಾಜೀನಾಮೆ ಮಾಹಿತಿ ನನಗೆ ಮಾಧ್ಯಮಗಳಿಂದಷ್ಟೇ ತಿಳಿಯಿತು. ನಾವೇನು ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಆದರೆ ಮೈತ್ರಿ ಸರ್ಕಾರದಲ್ಲಿ 20ಕ್ಕೂ ಹೆಚ್ಚು ಮಂದಿ ಅತೃಪ್ತರಿದ್ದಾರೆ. ಸರ್ಕಾರ ಬಿದ್ದು ಹೋದರೆ ನಾವು ಹೊಸ ಸರ್ಕಾರ ರಚಿಸುತ್ತೇವೆ ಎಂದರು.

ಅತೃಪ್ತ ಶಾಸಕರು ರಾಜೀನಾಮೆ ನೀಡಿದರೆ ನಾವು ಸರ್ಕಾರ ರಚಿಸುತ್ತೇವೆ. ನಾವೇನು ಸನ್ಯಾಸಿಗಳಲ್ಲ. ಚುನಾವಣೆಗೆ ಹೋಗುವುದಿಲ್ಲ. ಎಲ್ಲರ ಸಹಕಾರದಿಂದ ನಾವು ಉತ್ತಮ ಆಡಳಿತ ನೀಡುತ್ತೇವೆ ಎಂದು ಬಿಎಸ್ ವೈ ಹೇಳಿದರು.

ರಾಜೀನಾಮೆ ಖಚಿತ ಪಡಿಸಿದ ಆನಂದ್ ಸಿಂಗ್
ಬೆಂಗಳೂರಿನ ತಮ್ಮ ನಿವಾಸದಲ್ಲಿದ್ದ ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ತೆರಳಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆನಂದ್ ಸಿಂಗ್ ನಾನು ಸ್ಪೀಕರ್ ಗೆ ಬೆಳಗ್ಗೆಯೇ ರಾಜೀನಾಮೆ ಸಲ್ಲಿಸಿದ್ದೇನೆ. ಈಗ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ ಮಾಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next