Advertisement

ಆರ್.ಎಸ್.ಎಸ್ ನಾಯಕರ ಜೊತೆ ಯಡಿಯೂರಪ್ಪ ಮಹತ್ವದ ಚರ್ಚೆ

04:44 PM Jul 29, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಂಘ ಪರಿವಾರದ ಮುಖಂಡರನ್ನು ಭೇಟಿಯಾಗಿದ್ದಾರೆ.

Advertisement

ಆರ್.ಎಸ್.ಎಸ್ ನ ಹಿರಿಯ ನಾಯಕ ಮುಕುಂದ್ ಅವರನ್ನು ಬಿಎಸ್ ಯಡಿಯೂರಪ್ಪ ಕೇಶವಕೃಪದಲ್ಲಿ ಭೇಟಿಯಾದರು. ಯಡಿಯೂರಪ್ಪ ಕೇಶವಕೃಪ ಭೇಟಿ ಬೆನ್ನಲ್ಲೆ ಬಿಜೆಪಿ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಪರಿಷತ್ ಸದಸ್ಯ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಕೂಡಾ ಆಗಮಿಸಿದರು.

ಇದನ್ನೂ ಓದಿ:ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡುವಂತೆ ಸ್ವಾಮೀಜಿಗಳ ಆಗ್ರಹ

ಆರ್ ಎಸ್ಎಸ್ ನಾಯಕರ ಜೊತೆ ಯಡಿಯೂರಪ್ಪ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಪಕ್ಷ ಸಂಘಟನೆಯತ್ತ ಹೆಚ್ಚು ಗಮನ ನೀಡುತ್ತೇನೆ ಎಂದಿದ್ದ ಬಿಎಸ್ ವೈ ಈ ನಡೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next