Advertisement

ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಮಾಡಲಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

09:20 AM Dec 19, 2021 | Team Udayavani |

ಶಿವಮೊಗ್ಗ: ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರಿಂದ ಗಲಭೆ ಮಾಡಲಾಗುತ್ತಿದೆ. ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ. ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ ಕೆಲಸ ಮುಂದುವರಿಯುತ್ತದೆ. ವಿಧಾನ ಮಂಡಲದಲ್ಲಿ ವ್ಯಾಪಕ ಚರ್ಚೆ ಮಾಡಿ ಇನ್ನು ಮುಂದೆ ಈ ರೀತಿ ಘಟನೆಗಳು ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಅಪರಾಧಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಬಿಎಸ್ ವೈ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿಯವರನ್ನು ಕೇಳಬೇಕು‌. ನನಗೆ ಗೊತ್ತಿರುವಂತೆ ಇದುವರೆಗೆ ಸಚಿವ ಸಂಪುಟ ವಿಸ್ತರಣೆಯ ಯಾವುದೇ ಸುದ್ದಿಗಳು ಇಲ್ಲ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅದು ಹೈಕಮಾಂಡ್ ಹಾಗೂ ಸಿಎಂಗೆ ಬಿಟ್ಟ ವಿಚಾರ ಎಂದರು.

ಇದನ್ನೂ ಓದಿ:ವೈದ್ಯರ ಕೊಠಡಿಯೊಳಗೆ ಲಾಕ್‌ ಆದ ಮಗು! ಅಗ್ನಿಶಾಮಕಸಿಬ್ಬಂದಿಗಳ ಆಗಮನದಿಂದ ಪ್ರಕರಣ ಸುಖಾಂತ್ಯ

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಪರಿಷತ್‌ನಲ್ಲೂ ನಮಗೆ ಬಹುಮತ ಸಿಗುತ್ತದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಎಂಇಎಸ್ ಈ ಮಟ್ಟಿಗೆ ಬೆಳೆಯಲು ಹಿಂದೆ‌ ಬಿಜೆಪಿ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ಯಾರೋ ಕೆಲವರು ವಾಸ್ತವಿಕ ಸತ್ಯ ಸಂಗತಿಗಳು ತಿಳಿಯದವರು ಮಾಡಿದ ಆರೋಪಕ್ಕೆ‌ ಅರ್ಥವಿಲ್ಲ. ಯಾರೇ ಅಪರಾಧ ಮಾಡಿದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕ್ರಮ‌ ಜರುಗಿಸಿ ಜೈಲಿಗೆ ಕಳುಹಿಸಿರುವುದೇ ಇದಕ್ಕೆ‌ ಉದಾಹರಣೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next