Advertisement

ಆರ್‌ಎಸ್‌ಎಸ್‌ ವಿರುದ್ಧ ಅನಾವಶ್ಯಕವಾಗಿ ಮಾತನಾಡುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ: ಬಿಎಸ್‌ವೈ

08:19 PM Sep 29, 2022 | Team Udayavani |

ಶಿವಮೊಗ್ಗ: ಆರ್‌ಎಸ್‌ಎಸ್‌ ವಿರುದ್ಧ ಅನಾವಶ್ಯಕವಾಗಿ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದರು.

Advertisement

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ. ಯಾಕೋ ಇತ್ತೀಚೆಗೆ ಹುಚ್ಚು ಹುಚ್ಚಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹ ಆರ್‌ಎಸ್‌ಎಸ್‌ನಿಂದ ಬಂದವರು. ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂದ್‌ ಮತ್ತು ನಾವೆಲ್ಲರೂ ಕೂಡ ಸಂಘ ಪರಿವಾರದಿಂದಲೇ ಬಂದವರು. ಸಂಘದ ಬಗ್ಗೆ ಸರಿಯಾಗಿ ತಿಳಿಯದೇ ಮಾತನಾಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವಂತಹದ್ದಲ್ಲ ಎಂದರು.

ಪ್ರಧಾನಿ ಮೋದಿ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣದಲ್ಲಿ ನಮ್ಮ ಪಕ್ಷವಿದೆ. ಮೋದಿ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಾ ಅಭಿವೃದ್ಧಿಯಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿ ನಾಯಕತ್ವ ಮೆಚ್ಚಿ ಬೇರೆ ಪಕ್ಷದ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇನ್ನೂ ಹಲವು ಮುಖಂಡರು ಬಿಜೆಪಿ ಸೇರುವ ಚಿಂತನೆಯಲ್ಲಿದ್ದಾರೆ. ಇವರೆಲ್ಲಾ ಸೇರಿದ ನಂತರ ನಮಗೆ ಮತ್ತಷ್ಟು ಬಲ ಬರುತ್ತದೆ. ಪಕ್ಷಕ್ಕೆ ಸೇರುವ ಮುಖಂಡರಿಗೆ ಅವರ ಅನುಭವ, ಅರ್ಹತೆ ಆಧಾರದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದಲ್ಲಿ ಚಿಂತನೆ ನಡೆಸಿದ್ದು, ಎಲ್ಲರೊಂದಿಗೆ ಚರ್ಚಿಸಿ, ಇದನ್ನು ಮಾಡಲಾಗುತ್ತದೆ. ವಿವಿಧ ಪಕ್ಷಗಳ ಅನೇಕ ಮುಖಂಡರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು ಎಲ್ಲರನ್ನೂ ಸ್ವಾಗತಿಸುತ್ತೇನೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next