Advertisement

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

10:58 AM Mar 21, 2021 | Team Udayavani |

ಸಿಂಧನೂರು (ರಾಯಚೂರು): ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು. ಆದರೆ, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ನಗರದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಸ್ಕಿಯಲ್ಲಿ ಪ್ರತಾಪಗೌಡ ಪ್ರಚಾರಕ್ಕೆ ಹೋದಾಗ ಭವ್ಯ ಸ್ವಾಗತ ಸಿಕ್ಕಿದೆ. ಪ್ರತಾಪಗೌಡ ಪಾಟೀಲ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಕ್ಷೇತ್ರದಲ್ಲಿ ಮತ್ತೊಮ್ಮೆ ಬಂದು ಪ್ರಚಾರ ಮಾಡುತ್ತೇನೆ.  ಬಸವಕಲ್ಯಾಣ ದಲ್ಲಿ ನಾವು ಗೆದ್ದಾಗಿದೆ ಎಂದರು.

ಇದನ್ನೂ ಓದಿ:ಬಿರುಸುಗೊಂಡ ಉಪ ಚುನಾವಣೆ ಕಣ

ಬೆಳಗಾವಿಯಲ್ಲಿ ನಾವು ಗೆಲ್ಲಲಿದ್ದೇವೆ. ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ಇಂದು, ನಾಳೆಯೊಳಗೆ ಅಭ್ಯರ್ಥಿ ಪಟ್ಟಿ ಬರುತ್ತದೆ ಎಂದರು‌.

Advertisement

5ಎ ಕಾಲುವೆ ಬದಲು ವಟಗಲ್ ಬಸವೇಶ್ವರ ಏತ ನೀರಾವರಿ ಮಾಡಲಾಗುವುದು. ಅವಶ್ಯವಿರುವ ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 10 ತನಕ ನೀರು ಹರಿಸುವುದಕ್ಕೆ ಸಂಬಂಧಿಸಿ ರೈತರಿಗೆ ಅನುಕೂಲಕರವಾಗುವ ನಿರ್ಧಾರ ಕೈಗೊಳ್ಳಲಾಗುವುದು. ಇತಿಹಾಸದಲ್ಲೇ ಮೊದಲ ಬಾರಿಗೆ ತೆರಿಗೆ ಹೊರೆ ಇಲ್ಲದ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ 130 ಸೀಟುಗಳನ್ನು ಗೆಲ್ಲಲಿದೆ ಎಂದರು.

ಇದನ್ನೂ ಓದಿ: ಹಸಿವಿನ ವ್ಯಾಪಾರದ ವಿರುದ್ಧ ನಾವುಗಳು ಹೋರಾಡುತ್ತಿದ್ದೇವೆ: ರಾಕೇಶ್ ಟಿಕಾಯತ್

ಬಿಜೆಪಿ ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next