ಶಿವಮೊಗ್ಗ: ಸ್ಯಾಂಟ್ರೋ ರವಿ ವಿಷಯದಲ್ಲಿ ಸಿಎಂ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಸಚಿವರ ಹೆಸರು ಕೇಳಿ ಬಂದ ವಿಚಾರ ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ. ಸ್ಯಾಂಟ್ರೋ ರವಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾತಾನಾಡಿದ ಅವರು, ಸಂಪುಟದ ವಿಸ್ತರಣೆ ವಿಷಯ ಚರ್ಚೆಯಾಗುತ್ತಿದೆ. ಕೇಂದ್ರದ ನಾಯಕರ ಸೂಚನೆಗೆ ಕಾದು, ನೋಡುತ್ತಿದ್ದೇವೆ. ಎಷ್ಟು ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ತಿಳಿದಿಲ್ಲ. ಕೆ ಎಸ್ ಈಶ್ವರಪ್ಪನವರಿಗೆ ಸಚಿವ ಸ್ಥಾನ ಸಿಗುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡುವ ವಿಚಾರ ವರಿಷ್ಠರಿಗೆ ಬಿಟ್ಟಿದ್ದು. ಆದರೆ, ಈಶ್ವರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಪೇಕ್ಷೆ ಎಂದರು.
ಇದನ್ನೂ ಓದಿ:ದಟ್ಟ ಮಂಜು; ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ವೇನಲ್ಲಿ ಉರುಳಿ ಬಿದ್ದ ಬಸ್, ಮೂವರು ಪ್ರಯಾಣಿಕರು ವಿಧಿವಶ
https://youtu.be/2LvaEeLirJU
ಕಾಂಗ್ರೆಸ್ ಪಕ್ಷದ ಐಕ್ಯತಾ ಸಮಾವೇಶದ ಕುರಿತು ಮಾತಾನಾಡಿದ ಅವರು, ಅವರ ಸಮಾವೇಶ, ಯಾತ್ರೆಗೆ ಏನು ಬೆಲೆ ಇದೆ. ಮೀಸಲಾತಿ ಕುರಿತು ಬಿಜೆಪಿ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ತಿರುಚಿ ಕಾಂಗ್ರೆಸ್ಸಿಗರು ಮನಬಂದಂತೆ ಮಾತನಾಡುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಮನಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಎಷ್ಟು ಗೌರವ ತರುತ್ತದೆ ಎಂಬುದು ನನಗೆ ಅರ್ಥ ಆಗಿಲ್ಲ. ಇನ್ನಾದರೂ ವಾಸ್ತವಿಕ ಸಂಗತಿ ತಿಳಿದು ಮಾತನಾಡಲಿ. ಕಾಂಗ್ರೆಸ್ಸಿಗರಂತೂ ಮಾಡಲಿಲ್ಲ ನಾವು ಮಾಡಿದ್ದು ಸ್ವಾಗತ ಮಾಡಬೇಕಿತ್ತು. ಸುಮ್ಮನೆ ಟೀಕೆ ಮಾಡುವುದು ಸರಿಯಲ್ಲ… ಮೀಸಲಾತಿ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.