Advertisement

ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ: ಕೈ ನಾಯಕರಿಗೆ ಬಿಎಸ್ ವೈ ಟಾಂಗ್

10:17 AM Jul 21, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ನವರಿಗೆ ಒಂದು ಮಾತು ಹೇಳಲು ಇಚ್ಚೆ ಪಡುತ್ತೇನೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿಯಾಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗುವುದು. ನೂರಕ್ಕೆ ನೂರು ಬಹುಮತದಿಂದ ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ:ಮುಖ್ಯಮಂತ್ರಿಗಳ ದೆಹಲಿ ಪ್ರವಾಸ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

ಕೆ.ಆರ್. ಪೇಟೆ ಮತ್ತು ಸುತ್ತಮುತ್ತ ಪ್ರವಾಸ ಮಾಡಿಕೊಂಡು ಬರುತ್ತೇನೆ. ಕೆ.ಆರ್. ಪೇಟೆಯಲ್ಲಿ ಬಹಳ ಶ್ರಮ ಹಾಕಿ ವಿಜಯೇಂದ್ರನ ಪ್ರಯತ್ನದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಈಗ ನಾರಾಯಣ ಗೌಡರು ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರ ಗೆಲ್ಲುವ ವಾತಾವರಣ ಸೃಷ್ಟಿ ಮಾಡಿದ್ದಾರೆ. ಹೀಗಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಇಂದು ಸಭೆಯಾಗುತ್ತಿದೆ ಎಂದು ಬಿಎಸ್ ವೈ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next