Advertisement

B. S. Yediyurappa: ವಿಜಯೇಂದ್ರ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ

10:35 PM Nov 19, 2024 | Shreeram Nayak |

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿ ನಡೆಯುತ್ತಿದೆ. ವಿಜಯೇಂದ್ರ ಮಾಡುತ್ತಿರುವ ಉತ್ತಮ ಕೆಲಸವನ್ನು ನೋಡಿ ಕೆಲವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಬಿಜೆಪಿ ಸಂಘಟನಾ ಪರ್ವ ಸಮಾಲೋಚನೆ ಸಭೆ ಉದ್ಘಾಟಿಸಿ ಮಾತನಾಡಿ, ಯಾವುದೇ ಶಕ್ತಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ವಿಶ್ವವೇ ಮೋದಿ ಆಡಳಿತವನ್ನು ಕಾತುರದಿಂದ ನೋಡುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಪಕ್ಷದ ಸದಸ್ಯರಾಗಿರುವುದು ಗೌರವದ ಸಂಗತಿ ಎಂದರು.

ಯಾವುದೇ ಕ್ಷಣ
ಸಿಎಂ ರಾಜೀನಾಮೆ
ಅಭಿವೃದ್ಧಿ ಕಾರ್ಯವಿಲ್ಲದೆ ರಾಜ್ಯ ಸರಕಾರ ದಿವಾಳಿಯಾಗಿದೆ. ರಾಜ್ಯ ಸರಕಾರಕ್ಕೆ ಹಗರಣಗಳ ಸರಮಾಲೆ ಸುತ್ತಿಕೊಂಡಿದೆ. ಜನರ ಪಾಲಿಗೆ ರಾಜ್ಯ ಸರಕಾರ ಸತ್ತು ಹೋಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕಾಗುತ್ತದೋ ಗೊತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next