ಕಾಪು: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರೇ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಾಪುವಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಊಹಾಪೋಹ ಎದ್ದಿದೆ. ಆದರೆ ಇಲ್ಲಿ ಯಾವುದೇ ಹುದ್ದೆ ಖಾಲಿಯಿಲ್ಲ. ಅವರೇ ಪೂರ್ಣಾವಧಿಯವರೆಗೂ ಮುಖ್ಯಮಂತ್ರಿಯಾಗಿ ಅಧಿಕಾರ ನಡೆದಲಿದ್ದಾರೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ ಸರಕಾರದ ಸಹಜ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಯಾರದ್ದೂ ಕೈವಾಡವಿಲ್ಲ. ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಆರೋಪ ಮಾಡುವ ಮುನ್ನ ಮಾಜಿ ಸಚಿವ ಯು.ಟಿ. ಖಾದರ್ ಅವರು ಸರಕಾರದ ಇಂತಹ ಯೋಜನೆಗಳ ಬಗ್ಗೆ ಅರಿತುಕೊಂಡೇ ಮಾತನಾಡುವ ಅಗತ್ಯವಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರನ್ನು ನಿಗಮ ಮಂಡಳಿಗೆ ಆಯ್ಕೆ ಮಾಡಿ, ಅದನ್ನು ವಾಪಾಸು ಪಡೆದಿರುವಲ್ಲಿ ಯಾವುದೇ ಲಾಭಿಯಿಲ್ಲ. ಅವರಿಗೆ ಅದಕ್ಕಿಂತಲೂ ಒಳ್ಳೆಯ ಹುದ್ದೆ ಶೀಘ್ರದಲ್ಲೇ ಸಿಗುವ ವಿಶ್ವಾಸವಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿ.ಪಂ.ಸದಸ್ಯೆ ಶಿಲ್ಪಾ ಜಿ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.