Advertisement
ಈ ಮೂಲಕ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿರುವ ವೇಳೆಯಲ್ಲಿ ಬಿಜೆಪಿ ಮಾಜಿ ಸಂಸದ ಕೆ.ಬಿ. ಶಾಣಪ್ಪ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಪಕ್ಷದ ಜಿಲ್ಲಾ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಶಾಣಪ್ಪ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಶಾಣಪ್ಪ ಪುತ್ರ ಕೆ.ಬಿ. ವಿನೋದ ಸೇರಿ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತದನಂತರ ಅಫಜಲಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಚುನಾವಣಾ ಪ್ರಚಾರದಲ್ಲಿ ಕಳೆದ ಸಲ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಖಂಡ ರಾಜೇಂದ್ರ ಪಾಟೀಲ್ ರೇವೂರ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. Advertisement
ಕಾಂಗ್ರೆಸ್ ಸೇರಿದ ಶಾಣಪ್ಪ
11:45 PM Apr 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.