Advertisement
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಂಡು, ಜನರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದರು.
Related Articles
Advertisement
ಲಸಿಕೆ ಖರೀಧಿಸಲು ಶಾಸಕರ ನಿಧಿಯಿಂದ 100 ಕೋಟಿ ರೂ. ನೀಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈಗಾಗಲೇ ಎಲ್ಲಾ ಶಾಸಕರ ವೇತನ ಹಾಗೂ ಶಾಸಕರ ನಿಧಿಯನ್ನು ಮುಂದಿನ 6 ತಿಂಗಳ ಕಾಲ ತಡೆ ಹಿಡಿದು ಕೊರೊನಾ ನಿರ್ವಹಣೆಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದರಲ್ಲಿ ಕಾಂಗ್ರೆಸ್ ನಾಯಕರು ಕೊಡುವುದು ಏನಿದೆ, ಸ್ವಂತ ಹಣವನ್ನು ಅಥವಾ ಮನೆಯಿಂದ ಕೊಡ್ತಿರಾ ಎಂದು ಶ್ರೀರಾಮುಲು ಪ್ರಶ್ನಿಸಿದರು.
ಜನರ ದಾರಿ ತಪ್ಪಿಸಿ, ಗೊತ್ತಾಗದಂತೆ ಲಸಿಕೆ ಹಾಕಿಸಿಕೊಂಡಿದ್ದಾರೆ:
ಕೋವಿಡ್‌ಗೆ ನೀಡುತ್ತಿರುವ ಲಸಿಕೆಯಲ್ಲಿ ಏನೂ ಇಲ್ಲ, ಅದು ಡಿಸ್ಟಿಲ್ ವಾಟರ್, ಅದನ್ನು ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂಬಿತ್ಯಾದಿ ಅಪಪ್ರಚಾರ ಮಾಡಿ, ಜನರಲ್ಲಿ ಗೊಂದಲ ಮೂಡಿಸಿ ಕಾಂಗ್ರೆಸ್ ನಾಯಕರು ಗೊತ್ತಾಗದಂತೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಇಂದು ದೇಶದಲ್ಲಿ ಇಷ್ಟೊಂದು ಜನ ಸಾವು-ನೋವು ಅನುಭವಿಸಲು ಕಾಂಗ್ರೆಸ್ಸೇ ಕಾರಣ. ನಮ್ಮ ಸರ್ಕಾರ ಕಳೆದ ಕೋವಿಡ್ ಸಂದರ್ಭದಲ್ಲಿ ೨೫೦೦ ಕೋಟಿ ರೂ. ಹಾಗೂ ಈಗ 1250 ಕೋಟಿ ರೂ. ಆರ್ಥಿಕ ನೆರವು ನೀಡಿದೆ. ಆದರೆ, ಕಾಂಗ್ರೆಸ್ ಏನು ಕೊಟ್ಟಿದೆ ಎಂದು ಶ್ರೀರಾಮುಲು ಪ್ರಶ್ನಿಸಿದರು.
ಎಚ್‌ಡಿಕೆ, ದೇವೇಗೌಡರಿಗೆ ಅಭಿನಂದನೆ:
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೋವಿಡ್ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಲಹೆ ನೀಡುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ಕಾಂಗ್ರೆಸ್ ಕೇವಲ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಎ. ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ವೈ.ಎ. ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಇದ್ದರು.