Advertisement

Congress: ಕಾಂಗ್ರೆಸ್‌ ಪಕ್ಷ ಡಿಎಂಕೆಯ ಬಿ ಟೀಮ್‌: ಎಚ್‌ಡಿಕೆ

12:24 AM Sep 27, 2023 | Team Udayavani |

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್‌ ಆಗಿ ಪರಿವರ್ತನೆ ಆದ ಪರಿಣಾಮ ಕಾವೇರಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Advertisement

ಮಂಗಳವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್‌ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್‌ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಯಾರಿಗೆ ಎಂದು ಪ್ರಶ್ನಿಸಿದ್ದಾರೆ.

ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿ ರುವುದು ಸರಕಾರದ ಕಿಡಿಗೇಡಿತನದ ಪರಮಾವಧಿ.

ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತತ್‌ಕ್ಷಣ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next