Advertisement
ಗುರುವಾರ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ದೇಶವನ್ನು ಅಭಿವೃದ್ಧಿಗೊಳಿಸುವ ಚುನಾವಣೆ. ಗ್ಯಾರಟಿಗಾಗಿ ನಡೆಯವ ಚುನಾವಣೆ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕಾಗಿ, ಸ್ವಾವಲಂಬಿಯಾಗಿ ಬದುಕಬೇಕೆನ್ನುವ ದೃಷ್ಟಿಯಿಂದ ಅನೇಕಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳಾ ಮೀಸಲಾತಿ, ಸ್ಟಾರ್ಟಪ್ ಯೋಜನೆ, ತ್ರಿವಳಿ ತಲಾಖ್. ಜನಧನ್ ಯೋಜನೆ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ, ವಿಶ್ವಕರ್ಮ ಯೋಜನೆ, ಲಕ್ ಪತ್ ದೀದಿ ಹೀಗೆ ಹತ್ತು ಹಲವು ಕಾರ್ಯಕ್ರಮ ನೀಡಿದ್ದಾರೆ. ಇಂತಹ ವ್ಯಕ್ತಿಯಾದ ಮೋದಿಯವರು ಮತ್ತೆ ಪ್ರದಾನಿಯಾಗಬೇಕು ಎಂದು ಹೇಳಿದರು.
ಅವರು ಪ್ರತಿ ಗ್ರಾಮಗಳಲ್ಲಿ ಉತ್ತಮ ರಸ್ತೆ, ನೀರು, ಶೌಚಾಲಯ, ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಉಚಿತ ಲಸಿಕೆ ನೀಡಿ ದೇಶದ ಜನರ ಜೀವ ಉಳಿಸಿದ್ದಾರೆ ಎಂದರು. ಚುನಾವಣೆಗಾಗಿ ಮಾತ್ರ ಮಾತನಾಡುವ ಪಕ್ಷ, ವ್ಯಕ್ತಿ ನಾವಲ್ಲ. ಜನರ ಮಧ್ಯೆ ಇದ್ದು ಅಭಿವೃದ್ಧಿ, ದೇಶದ ರಕ್ಷಣೆ, ಜನಪರ ಯೋಜನೆಗಳ ಚಿಂತನೆ ನಡೆಸುವ ಪಕ್ಷ ಬಿಜೆಪಿ. ಇದರ ಕಾರ್ಯಕರ್ತರಾಗಿರುವ ನಾವು ಪ್ರಧಾನಿ
ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕಿದೆ. ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ.
ಇವು ದೀರ್ಘಕಾಲ ಇರಲು ಸಾಧ್ಯವಿಲ್ಲ. ಈ ವಿಷಯಗಳನ್ನು ಮಹಿಳೆಯರು ಬೂತ್ ಮಟ್ಟದಲ್ಲಿ ಜನರಿಗೆ ತಿಳಿಸಬೇಕು. ಈ ಕಾರಣದಿಂದ ಕ್ಷೇತ್ರದಲ್ಲಿ
ಬಿಜೆಪಿಯನ್ನು ಮತ್ತೂಮ್ಮೆ ಗೆಲ್ಲಿಸಬೇಕಿದೆ ಎಂಬುದನ್ನು ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಜನರಿಗೆ ಮನವರಿಕೆ ಮಾಡಬೇಕೆಂದು ರಾಘವೇಂದ್ರ ಮನವಿ ಮಾಡಿದರು.
Related Articles
Advertisement
ಇದನ್ನೂ ಓದಿ: ಹೆರಿಗೆ ಮಾಡಿಸಲು ನಿರಾಕರಿಸಿದ ವೈದ್ಯರು… ಆಸ್ಪತ್ರೆ ಹೊರಗೆ ಮಗುವಿಗೆ ಜನ್ಮ ನೀಡಿದ ಮಹಿಳೆ