Advertisement

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

01:57 PM Apr 20, 2024 | Suhan S |

ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್‌ ಪಕ್ಷವೇ ಇಲ್ಲ. ಅಪ್ಪಿತಪ್ಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಜನರಿಗೆ ಆರಂಭ ದಿಂದಲೂ ಚೊಂಬನ್ನೇ ನೀಡುತ್ತಿರುವ ಕಾಂಗ್ರೆಸ್‌ ನಾಯಕರು ಅದಕ್ಕೆ ತಕ್ಕಂತೆ ಜಾಹೀರಾತು ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸೋಲಿನ ಭೀತಿ ಎದು ರಾದಾಗೆಲ್ಲ ಕಾಂಗ್ರೆಸ್‌ ಇವಿಎಂ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತದೆ. ಕಾಂಗ್ರೆಸ್‌ ಆಕ್ಷೇಪದ ಬಗ್ಗೆ ಜನ ರಿಗೆ ಗೊತ್ತಿದೆ. ದೇಶದಲ್ಲಿ ಮೊದಲ ಹಂತದ ಚುನಾವಣೆ ನಡೆಯು ತ್ತಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಮತ್ತೂಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಈ ಬಗ್ಗೆ ಅನುಮಾನ ಬೇಡ. ಶಿವಮೊಗ್ಗದಲ್ಲಿ ಒಂದು ಲಕ್ಷಕ್ಕೂ ಅಧಿ ಕ ಮತಗಳ ಲೀಡ್‌ನಿಂದ ಬಿಜೆಪಿ ಗೆಲ್ಲಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next