Advertisement
ಕ್ಷೇತ್ರದ ಕುಂದಲಹಳ್ಳಿ ಸಮೀಪ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯುಪಿಎ ಆಡಳಿತ ಅವಧಿಯಲ್ಲಿ ಒಂದೆರಡಲ್ಲ ಬರೋಬ್ಬರಿ 12 ಲಕ್ಷ ಕೋಟಿ ಹಗರಣ ನಡೆದಿವೆ. ಈಗ ಕಾಂಗ್ರೆಸ್ ನವರು ಭ್ರಷ್ಟಾಚಾರದ ಬಗ್ಗೆ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
Related Articles
Advertisement
ಜನಪರ ಆಡಳಿತ ನಡೆಸಿರುವ ರಾಜ್ಯ ಸರ್ಕಾರವು ಮತ್ತೊಮ್ಮೆ ಆರಿಸಿ ಬರಲು ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು.
ನಮ್ಮ ಡಬಲ್ ಇಂಜಿನ್ ಸರ್ಕಾರವು ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಪ್ರಾಮಾಣಿಕವಾಗಿ ಜನರಿಗೆ ತಿಳಿಸುವ ಕೆಲಸ ಮಾಡಿದ್ದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಮಹಿಳಾ ಅಧ್ಯಕ್ಷೇ ಗೀತಾ ವಿವೇಕಾನಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಮೋಹನ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ವಕ್ತಾರರಾದ ಮಾಳವಿಕಾ ಅವಿನಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಮಂಜುನಾಥ್, ನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೇ ರೇಖಾಗೊವಿಂದ್, ಕ್ಷೇತ್ರ ಮಹಿಳಾ ಅಧ್ಯಕ್ಷರಾದ ಪುಷ್ಪಾ, ಮಮತಾ. ಮುಖಂಡರಾದ ಮಹೇಂದ್ರ ಮೋದಿ, ಮನೋಹರ್ ರೆಡ್ಡಿ, ನಟರಾಜ್, ರಾಜ ರೆಡ್ಡಿ ಹಾಗೂಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು