Advertisement

ಮುಂದಿನ ಚುನಾವಣಾ ಫಲಿತಾಂಶದಲ್ಲಿ ಜನರೇ ಕಾಂಗ್ರೆಸ್ ನಾಯಕರ ಕಿವಿಗೆ ಹೂ ಇಡುತ್ತಾರೆ: ವಿಜಯೇಂದ್ರ

05:54 PM Mar 05, 2023 | Team Udayavani |

ಮಹದೇವಪುರ: ದೇಶ ಮತ್ತು ರಾಜ್ಯದಲ್ಲಿ ಭ್ರಷ್ಟಾಚಾರದ ಕೂಸುನ್ನು ಹುಟ್ಟು ಹಾಕಿದ್ದು ಕಾಂಗ್ರೆಸ್ ಪಕ್ಷದವರು. ಈಗ ಬಿಜೆಪಿ ಬಗ್ಗೆ ಬೊಬ್ಬೆ ಹೊಡಿಯುತ್ತಿದ್ದಾರೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

Advertisement

ಕ್ಷೇತ್ರದ ಕುಂದಲಹಳ್ಳಿ ಸಮೀಪ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯುಪಿಎ ಆಡಳಿತ ಅವಧಿಯಲ್ಲಿ ಒಂದೆರಡಲ್ಲ ಬರೋಬ್ಬರಿ 12 ಲಕ್ಷ ಕೋಟಿ ಹಗರಣ ನಡೆದಿವೆ. ಈಗ ಕಾಂಗ್ರೆಸ್ ನವರು ಭ್ರಷ್ಟಾಚಾರದ ಬಗ್ಗೆ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ರಷ್ಟೆ ಸತ್ಯ. ಕಾಂಗ್ರೆಸ್ ಪಕ್ಷದ ಸುಳ್ಳು ಆರೋಪಗಳಿಗೆ ‌ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಯಿ ಬಜೆಟ್ ಮಂಡಿಸುವ ವೇಳೆ ಕಾಂಗ್ರೆಸ್ ಪಕ್ಷದ ನಾಯಕರು ಕಿವಿಯಲ್ಲಿ ಚೆಂಡು ಹೂ ಇಟ್ಟು ಕೊಂಡು ಬಂದಿದ್ದರು. ವಿಧಾನ ಸಭಾ ಚುನಾವಣೆ ಫಲಿತಾಂಶದ ನಂತರ ಜನರೇ ಕಾಂಗ್ರೆಸ್ ನವರಿಗೆ ಹೂ ಇಡುತ್ತಾರೆ ಎಂದು ಹೇಳಿದರು.

ನಂತರ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಬಿಜೆಪಿ ಪಕ್ಷವು ತಳಮಟ್ಟದಿಂದಲೂ ಪ್ರಬಲ ಮಹಿಳಾ ಕಾರ್ಯಕರ್ತರನ್ನು ಹೊಂದಿದೆ, ಮಾತೆಯರ ಹಾಗೂ ಹೆಣ್ಣುಮಕ್ಕಳ ಪರ ಅನೇಕ ಯೋಜನೆಗಳನ್ನು ರೂಪಿಸಿರುವ ನಮ್ಮ ಸರಕಾರಕ್ಕೆ ಮಾತೆಯರ ಆಶೀರ್ವಾದವಿದೆ.

Advertisement

ಜನಪರ ಆಡಳಿತ ನಡೆಸಿರುವ ರಾಜ್ಯ ಸರ್ಕಾರವು ಮತ್ತೊಮ್ಮೆ ಆರಿಸಿ ಬರಲು ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು.

ನಮ್ಮ ಡಬಲ್ ಇಂಜಿನ್ ಸರ್ಕಾರವು ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಪ್ರಾಮಾಣಿಕವಾಗಿ ಜನರಿಗೆ ತಿಳಿಸುವ ಕೆಲಸ ಮಾಡಿದ್ದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಮಹಿಳಾ ಅಧ್ಯಕ್ಷೇ ಗೀತಾ ವಿವೇಕಾನಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಮೋಹನ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ವಕ್ತಾರರಾದ ಮಾಳವಿಕಾ ಅವಿನಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಮಂಜುನಾಥ್, ನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೇ ರೇಖಾಗೊವಿಂದ್, ಕ್ಷೇತ್ರ ಮಹಿಳಾ ಅಧ್ಯಕ್ಷರಾದ ಪುಷ್ಪಾ, ಮಮತಾ. ಮುಖಂಡರಾದ ಮಹೇಂದ್ರ ಮೋದಿ, ಮನೋಹರ್ ರೆಡ್ಡಿ, ನಟರಾಜ್, ರಾಜ ರೆಡ್ಡಿ ಹಾಗೂ
ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next