Advertisement

ನಟಿಯರು ಎಲ್ಲಾ ಪಕ್ಷದ ಪ್ರಚಾರದಲ್ಲಿ ಇರ್ತಾರೆ ಆಷ್ಟಕ್ಕೆ ಅದೇ ಪಕ್ಷದವರೆಂದು ಹೇಳಲಾಗದು: BYV

04:21 PM Sep 08, 2020 | keerthan |

ಮೈಸೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಬಂಧಿಸಿ ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಮಧ್ಯೆ ನಟಿ ರಾಗಿಣಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಚಿತ್ರ ನಟರು ಸಾಮಾನ್ಯವಾಗಿ ಎಲ್ಲಾ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ. ಕೆಲ ನಟ ನಟಿಯರು ಒಂದೇ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದೇ ಪಕ್ಷದವರು ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

Advertisement

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಈ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ, ನನಗೆ ಚಿತ್ರ ರಂಗದ ಬಗ್ಗೆ ಸಾಕಷ್ಟು ಗೌರವ ಇದೆ. ಚಿತ್ರ ನಟರು ಸಾಮಾನ್ಯವಾಗಿ ಎಲ್ಲಾ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ. ಕೆಲ ನಟ ನಟಿಯರು ಒಂದೆ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದೇ ಪಕ್ಷದವರು ಎಂದು ಹೇಳಲು ಸಾಧ್ಯವಿಲ್ಲ. ಇಲ್ಲಿ ಯಾರೇ ತಪ್ಪು ಮಾಡಿದರು ಅವರ ರಕ್ಷಣೆಯ ಪ್ರಶ್ನೆಯೇ ಇಲ್ಲ ಎಂದರು.

ಹಿಂದೆ ಯಾವ ಸರ್ಕಾರವು‌ ಮಾಡದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಸರ್ಕಾರ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಯಾವುದೇ ಪ್ರಭಾವಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ಮುಖ್ಯಮಂತ್ರಿಗಳು ಗೃಹ ಸಚಿವರು ಡ್ರಗ್ಸ್ ದಂಧೆ ಮಟ್ಟಹಾಕಲು ಶ್ರಮಿಸುತ್ತಿದ್ದಾರೆ. ಯಾರೇ ಇದ್ದರೂ ಅವರಿಗೆ ಕ್ಷಮೆ ಇಲ್ಲ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ: ಸುಶಾಂತ್ ಕೇಸ್; ಬಯಲಾಯ್ತು ರಿಯಾ ಡ್ರಗ್ಸ್ ಜಾಲ, ಬಾಲಿವುಡ್ ಸ್ಟಾರ್ ಗಳ ಬಂಧನ ಸಾಧ್ಯತೆ?

Advertisement

ತಮ್ಮ ವಿರುದ್ದ ಭ್ರಷ್ಟಾಚಾರ ಆರೋಪ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಈ ಆರೋಪಗಳು ಹೊಸದೇನಲ್ಲ‌. ಹಿಂದೆಯು ಮಾಡಿದ್ದರು, ಮುಂದೆಯು ಮಾಡುತ್ತಾರೆ. ನಮ್ಮ ಕುಟುಂಬದ ಮೇಲೆ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದಾರೆ ಆದಷ್ಟು ಬೇಗ ಬಿಡುಗಡೆ ಮಾಡಲಿ. ಬೇಗ ಬಿಡುಗಡೆ ಮಾಡಲಿ ಅಂತ ನಾನು ಕೂಡ ಕೇಳಿಕೊಳ್ಳುತ್ತೇನೆ‌. ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ,ನನ್ನ ಗುರಿ ಸ್ಪಷ್ಟವಾಗಿದೆ ಎಂದರು.

ಇದನ್ನೂ ಓದಿ: ಡ್ರಗ್ ಪೆಡ್ಲರ್ ವಿರೇನ್ ಖನ್ನಾ ಮನೆಯಲ್ಲಿ ಪೊಲೀಸ್ ಸಮವಸ್ತ್ರ ಪತ್ತೆ! ಏನಿದು ಹೊಸ ಟ್ವಿಸ್ಟ್

Advertisement

Udayavani is now on Telegram. Click here to join our channel and stay updated with the latest news.

Next