ಗಂಗಾವತಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಷಯದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ದೇಣಿಗೆ ಕೊಡುವುದಿಲ್ಲ ಎಂದಿದ್ದಾರೆ. ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಇಲ್ಲವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಧೂಳಿಪಟವಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:‘ಬಾಹುಬಲಿ’ ರೂಪದಲ್ಲಿ ಬಿ.ವೈ.ವಿಜಯೇಂದ್ರ: ಅಂಜನಾದ್ರಿ ಬೆಟ್ಟದಲ್ಲಿ ಕಲರ್ ಫುಲ್ ಬ್ಯಾನರ್ಸ್
ಕಿಷ್ಕಿಂದಾ ಅಂಜನಾದ್ರಿ ಎರಡನೇ ಅಯೋಧ್ಯೆಯ ಆಗಿದ್ದು, ಇದರ ಮೂಲ ಸೌಕರ್ಯ ಅಭಿವೃದ್ಧಿಗೆ ಈಗಾಗಲೇ 20 ಕೋಟಿ ರೂ. ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಅನುದಾನವನ್ನು ಕೊಡಿಸಲು ಯತ್ನಿಸಲಾಗುತ್ತದೆ. ಯಡಿಯೂರಪ್ಪ ಅವರಿಗೆ ರಾಜಕೀಯ ಮರುಹುಟ್ಟು ಕೊಟ್ಟ ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ ಎಂದರು.
ಶಾಸಕ ಪರಣ್ಣ ಮುನವಳ್ಳಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಕುರಿಉಣ್ಣೆ ನಿಗಮದ ಅಧ್ಯಕ್ಷ ಶರಣು ತಾಳಿಕೇರಿ, ವಿದ್ಯುತ್ ನಿಗಮದ ಅಧ್ಯಕ್ಷ ತಿಮ್ಮೇಶ ಗೌಡ, ಸಾಗರ ಮುನವಳ್ಳಿ, ಸಿ.ವಿ.ಚಂದ್ರಶೇಖರ, ಅಮರೇಶ ಕರಡಿ ಇದ್ದರು