Advertisement

ಉದ್ಯಮಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಕುಸಿಯಲು ಹಿಂದಿನ ಸರ್ಕಾರ ಕಾರಣ: ವಿಜಯೇಂದ್ರ

03:27 PM Sep 06, 2020 | keerthan |

ಬೆಂಗಳೂರು: 2018-19ನೇ ಸಾಲಿನ ವರದಿ ಆಧಾರದ ಮೇಲೆ ಉದ್ಯಮಸ್ನೇಹಿ ರಾಜ್ಯಗಳ ಶ್ರೇಯಾಂಕದಲ್ಲಿ ಕರ್ನಾಟಕದ ಸ್ಥಾನ ಕುಗ್ಗಲು, ಹಿಂದೆ ಆಡಳಿತ ನಡೆಸಿದವರ ವೈಫಲ್ಯದ ಫಲ ಎಂಬುದನ್ನು ಅಂಕಿ-ಅಂಶಗಳೇ ಸಾಕ್ಷೀಕರಿಸುತ್ತಿವೆ. ನೆರೆ, ಕೋವಿಡ್ ಹಾವಳಿಗಳ ನಡುವೆಯೂ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಸರ್ಕಾರ, ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಕಾಣಲು ಅವಕಾಶ ನೀಡಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭೂ-ಸುಧಾರಣ ಕಾಯ್ದೆಗೆ ತಿದ್ದುಪಡಿ ತಂದು ಕೃಷಿಕರ ಬದುಕೂ ಹಸನಾಗಬೇಕು, ರಾಜ್ಯಕ್ಕೆ ಸುಲಲಿತ ಬಂಡವಾಳವೂ ಹರಿದು ಬರಬೇಕು ಎಂಬ ಉದ್ದೇಶದಿಂದ ರಾಜ್ಯಸರ್ಕಾರ ರೈತ, ಉದ್ದಿಮೆ-ಸ್ನೇಹಿ ದಿಟ್ಟಹೆಜ್ಜೆ ಇರಿಸಿದೆ. 2008ರಲ್ಲಿ ಬಿಎಸ್ ವೈ ಸರ್ಕಾರ ಉದ್ದಿಮೆ ವಹಿವಾಟಿನ ಪಟ್ಟಿಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿತ್ತು ಎಂಬುದನ್ನು ನೆನಪಿಸಬಯಸುವೆ ಎಂದಿದ್ದಾರೆ.

ಎಷ್ಟೇ ಸಂಕಷ್ಟವಿರಲಿ, ಸವಾಲುಗಳಿರಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವದ್ದೇ ಸದ್ದು ಮೊಳಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಸ್ವಾವಲಂಬಿ ಭಾರತ ನಿರ್ಮಾಣ’ ದ ಸಂಕಲ್ಪಕ್ಕೆ ಕರ್ನಾಟಕ ಅಗ್ರಶ್ರೇಯಾಂಕದ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಡಳಿತ ಶೈಲಿ ಬಲ್ಲವರದ್ದಾಗಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next