Advertisement

ಕಾಂಗ್ರೆಸ್ ಮುಖಂಡ ಅಶೋಕ ಬಳೂಟಗಿ ಮನೆಗೆ ಬಿ.ವೈ.ವಿಜಯೇಂದ್ರ ಭೇಟಿ

06:18 PM Mar 14, 2023 | Team Udayavani |

ಕುಷ್ಟಗಿ: ಕಾಂಗ್ರೆಸ್ ಮುಖಂಡ ಅಶೋಕ ಬಳೂಟಗಿ ಅವರ ಮನೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

Advertisement

ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದ ಅಶೋಕ ಬಳೂಟಗಿ, ಈಗಾಗಲೇ ಭಿನ್ನರ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು ಆದರೆ ಬಿಜೆಪಿ ಅಧಿಕೃತವಾಗಿ ಸೇರಿರಲಿಲ್ಲ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಹನುಮಸಾಗರದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶಕ್ಕೆ ಆಗಮಿಸುವ ಪೂರ್ವದಲ್ಲಿ ಕುಷ್ಟಗಿಯ ಅಶೋಕ ಬಳೂಟಗಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಕೆ.ಶರಣಪ್ಪ, ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳೀಕೇರಿ, ಪ್ರಭಾಕರ ಚಿಣಿ ಮತ್ತೀತರರು ಭಾಗವಹಿಸಿದ್ದರು.

ಈ ಕುರಿತು ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಅಶೋಕ ಬಳೂಟಗಿ ಬಿಜೆಪಿ ಪಕ್ಷವನ್ನು ಶೀಘ್ರದಲ್ಲೇ ಸೇರಲಿದ್ದು ಅವರಿಂದ ಪಕ್ಷಕ್ಕೆ ಆನೆ ಬಲ ಬರಲಿದೆ ಎಂದರು. ಅಶೋಕ ಬಳೂಟಗಿ ಪ್ರತಿಕ್ರಿಯಿಸಿ ಎರಡು ಮೂರು ದಿನಗಳಲ್ಲಿ ನಾನು ಬಿಜೆಪಿ ಸೇರುವ ನಿರ್ಧಾರ ತಿಳಿಸುವೆ ಎಂದ ಅವರು, ಯಾವೂದೇ ಬೇಡಿಕೆ ಮುಂದಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೋಲ್ಡ್‌ ನೀರನ್ನು ಕುಡಿಯುವುದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳೇನು?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next