Advertisement

Amit Shah ಜತೆ ಉಪ ಚುನಾವಣೆ ಬಗ್ಗೆ ಬಿ.ವೈ.ವಿಜಯೇಂದ್ರ ಚರ್ಚೆ

09:24 PM Jun 25, 2024 | Team Udayavani |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಮಾಡಿದ್ದು ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣಾ ಸಿದ್ಧತೆ ಹಾಗೂ ರಾಜ್ಯ ರಾಜಕಾರಣದ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

Advertisement

ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದ ಅವರು, ಅಮಿತ್‌ ಶಾ ಅವರ ಭೇಟಿಗೆ ಸಮಯ ಕೋರಿದ್ದರು. ಸಂಸತ್‌ ಕಲಾಪದ ಗಡಿಬಿಡಿ ಮಧ್ಯೆಯೇ ವಿಜಯೇಂದ್ರ ಭೇಟಿಗೆ ಅಮಿತ್‌ ಶಾ ಅವಕಾಶ ನೀಡಿದ್ದರು. ಸುಮಾರು ಅರ್ಧ ಗಂಟೆ ಕಾಲ ಪ್ರಸಕ್ತ ವಿದ್ಯಮಾನಗಳಿಗೆ ಸಂಬಂಧಪಟ್ಟಂತೆ ಮಾತುಕತೆಗಳು ನಡೆದಿವೆ.

ಇದೇ ಸಂದರ್ಭದಲ್ಲಿ ಕಳೆದ ಲೋಕಸಭಾ ಚುನಾವಣೆಯ ಕರ್ನಾಟಕದ ಫ‌ಲಿತಾಂಶದ ಕುರಿತು ಅಮಿತ್‌ ಶಾ ತೃಪ್ತಿ ವ್ಯಕ್ತಪಡಿಸಿದರು ಎನ್ನಲಾಗಿದೆ.

ರಾಜ್ಯದಲ್ಲಿ ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ ರೂಪಿಸಿರುವ ಬಿಜೆಪಿ ರಾಜ್ಯ ಘಟಕದ ಸಿದ್ಧತೆ ಕುರಿತು ವಿಜಯೇಂದ್ರ ಈ ಸಂದರ್ಭದಲ್ಲಿ ವಿವರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next