Advertisement

ಬಾಬಾ ಬುಡನ್‌ಗಿರಿ: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್‌

07:00 AM Aug 03, 2018 | Team Udayavani |

ಬೆಂಗಳೂರು: ಬಾಬಾ ಬುಡನ್‌ಗಿರಿ-ದತ್ತಪೀಠದ ಉಸ್ತುವಾರಿ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಶಾಖಾದ್ರಿ ನೇಮಕಗೊಳಿಸಿರುವ ರಾಜ್ಯಸರ್ಕಾರದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಸ್ತರಿಸಿದೆ.

Advertisement

ಸರ್ಕಾರದ ಆದೇಶ ರದ್ದುಕೋರಿ ಗುರುದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ರಿಟ್‌ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ತಡೆಯಾಜ್ಞೆ ಅವಧಿಯನ್ನು ವಿಸ್ತರಿಸಿಆಗಸ್ಟ್‌ 9ಕ್ಕೆ ವಿಚಾರಣೆ ಮುಂದೂಡಿದೆ.

ದತ್ತಪೀಠದ ಉಸ್ತುವಾರಿ ಮತ್ತು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಶಾಖಾದ್ರಿ ನೇಮಕ ಸೇರಿದಂತೆ ಇನ್ನಿತರೆ ಅಂಶಗಳನ್ನೊಳಗೊಂಡಂತೆ ಕಂದಾಯ ಇಲಾಖೆ (ಮುಜರಾಯಿ ವಿಭಾಗ) ಕಾರ್ಯದರ್ಶಿ ಮಾ. 19ರಂದು ಹೊರಡಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌ ಸೌಹಾರ್ದಯುತವಾಗಿ ವಿವಾದ ಇತ್ಯರ್ಥಪಡಿಸುವಂತೆ ಕೋರ್ಟ್‌ ಸೂಚನೆ ನೀಡಿತ್ತು. ಈ ಮಧ್ಯೆ ತಜ್ಞರ ಸಮಿತಿ ನೇಮಿಸಿದ್ದ ಸರ್ಕಾರ ಅದರ ವರದಿ ಆಧರಿಸಿ ತೀರ್ಮಾನ ಕೈಗೊಂಡಿದ್ದು, ಇದು ಸುಪ್ರೀಂ ಕೋರ್ಟ್‌ ಆದೇಶಕ್ಕೆ ವ್ಯತಿರಿಕ್ತವಾಗಿದೆ. ತಜ್ಞರ ವರದಿ ಆಧರಿಸಿ ಸರ್ಕಾರ ಹೊರಡಿಸಿರುವ ಆದೇಶ ಕಾನೂನುಬಾಹಿರ ಎಂದು ಅರ್ಜಿದಾರರ ವಾದವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next