Advertisement

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

09:36 PM Oct 18, 2024 | Team Udayavani |

ಮುಂಬಯಿ:ಎನ್ ಸಿಪಿ(ಅಜಿತ್ ಪವಾರ್) ಬಣದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಶುಕ್ರವಾರ(ಅ18) ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 9ಕ್ಕೇರಿದೆ.

Advertisement

ಬಂಧಿತ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಐವರು ಆರೋಪಿಗಳನ್ನು ನ್ಯಾಯಾಲಯ ಅಕ್ಟೋಬರ್ 25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಇಬ್ಬರು ಶೂಟರ್‌ಗಳನ್ನು ಬಂಧಿಸಲಾಗಿದ್ದು, ಓರ್ವ ಪ್ರಮುಖ ಶೂಟರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಶೋಧ ನಡೆಯುತ್ತಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬಂಧಿತ ಐವರು ಆರೋಪಿಗಳು ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಮತ್ತು ಹಣವನ್ನು ನೀಡುತ್ತಿದ್ದರು. ಅವರು ಫೋನ್ ಮೂಲಕ ಬಿಷ್ಣೋಯ್ ಗ್ಯಾಂಗ್‌ಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next