Advertisement

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಇಂದು ತೀರ್ಪು ಪ್ರಕಟ

08:42 AM Sep 30, 2020 | Mithun PG |

ಲಕ್ನೋ: ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ಇಂದು ಹೊರಬೀಳಲಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಭವಿಷ್ಯ ನಿರ್ಧಾರವಾಗಲಿದೆ.

Advertisement

ಎಲ್ಲಾ ಆರೋಪಿಗಳು ಹಾಜರಿರಬೇಕೆಂದು ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೇ ಕೋವಿಡ್ ಕಾರಣದಿಂದ ಇವರಾರು ಹಾಜರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಅಡ್ವಾಣಿ ಮತ್ತು ಜೋಷಿ ಅವರಿಗೆ ವಯಸ್ಸಾಗಿದ್ದು ಅವರಿಗೆ ವಿನಾಯಿತಿ ನೀಡುವ ಸಾಧ್ಯತೆಯಿದೆ. ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಅನಾರೋಗ್ಯ ಪೀಡಿತರಾಗಿದ್ದಾರೆ.

ದೇಶವೇ ಕುತೂಹಲದಿಂದ ಕಾಯುತ್ತಿರುವ ಈ ಪ್ರಕರಣದ ಅಂತಿಮ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಎಲ್ಲಾ 32 ಆರೋಪಿಗಳು ಖುದ್ದು ಹಾಜರಿರಬೇಕೆಂದು ನ್ಯಾಯಾಲಯ ತಿಳಿಸಿದೆ. ಸಿಸಿಬಿ ವಿಶೇಷ ಕೋರ್ಟ್​ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 28 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.

ಸೆಪ್ಟೆಂಬರ್ 1ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next