Advertisement

ಬಾಬ್ರಿ ಧ್ವಂಸ ಕೇಸ್, ಮೇ30ಕ್ಕೆ ಖುದ್ದು ಹಾಜರಾಗಿ; ಆಡ್ವಾಣಿಗೆ ಕೋರ್ಟ್

03:40 PM May 25, 2017 | Sharanya Alva |

ನವದೆಹಲಿ:1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಿರಂತರವಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರಾದ ಎಲ್.ಕೆ.ಆಡ್ವಾಣಿ, ಉಮಾ ಭಾರತಿ ಹಾಗೂ ಮುರಳಿ ಮನೋಹರ್ ಜೋಶಿ ಅವರು ಮೇ 30ರಂದು ಖುದ್ದಾಗಿ ಕೋರ್ಟ್ ಗೆ ಹಾಜರಾಗಬೇಕೆಂದು ಲಕ್ನೋದ ವಿಶೇಷ ಸಿಬಿಐ ಕೋರ್ಟ್ ಗುರುವಾರ ಸೂಚಿಸಿದೆ.

Advertisement

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಂಚಿನಲ್ಲಿ ಶಾಮೀಲಾಗಿದ್ದಾರೆ ಎಂಬ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗಲು ವಿನಾಯ್ತಿ ನೀಡಬೇಕೆಂದು ಕೋರಿ ಆಡ್ವಾಣಿ ಸೇರಿದಂತೆ ಬಿಜೆಪಿ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರು.

1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಶುಕ್ರವಾರ ವಿಶೇಷ ಸಿಬಿಐ ಕೋರ್ಟ್‌ನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ ಸೇರಿ ಇತರೆ 7 ನಾಯಕರ ವಿರುದ್ಧ ಹೆಚ್ಚುವರಿ ಆರೋಪ ಮೇ 30ರಂದು ನಿಗದಿಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next