ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ (ಸೆಪ್ಟೆಂಬರ್ 30, 2020) ಅಂತಿಮ ತೀರ್ಪು ಪ್ರಕಟಿಸಲು ಕ್ಷಣಗಣನೆ ಆರಂಭವಾಗಿದೆ. ಒಂದು ವೇಳೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ 32 ಮಂದಿ ಮೇಲಿನ ಆರೋಪ ಸಾಬೀತಾದರೆ ಮುಂದೇನು ಮಾಡಲು ಕಾನೂನು ಪ್ರಕಾರ ಅವಕಾಶವಿದೆ ಎಂಬ ಕಿರು ವಿಶ್ಲೇಷಣೆ ಇಲ್ಲಿದೆ.
ಒಂದು ವೇಳೆ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಕ್ರಿಮಿನಲ್ ಒಳಸಂಚು ಆರೋಪ ಸಾಬೀತಾದರೆ ಜೈಲುಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಕಾನೂನು ತಜ್ಞರ ಅಭಿಪ್ರಾಯದ ಪ್ರಕಾರ ಕ್ರಿಮಿನಲ್ ಒಳಸಂಚು ಅಪರಾಧ ಸಾಕ್ಷ್ಯಗಳೊಂದಿಗೆ ಆರೋಪ ಸಾಬೀತುಪಡಿಸುವುದು ಕಷ್ಟ.
ಅಲ್ಲದೇ ಜೈಲುಶಿಕ್ಷೆ ವಿಧಿಸಿದರೂ ಕೂಡಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಆರೋಪಿಗಳಿಗೆ ಅವಕಾಶ ಇದೆ. ಒಂದು ವೇಳೆ ಎಲ್ಲಾ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದರೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆರೋಪಿಗಳ ಪರ ವಕೀಲರು ಬೇಲ್ ಬಾಂಡ್ ಅನ್ನು ಸಿದ್ದಪಡಿಸುತ್ತಿದ್ದಾರೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದರೆ ಸಿಬಿಐ ವಿಶೇಷ ಕೋರ್ಟ್ ನಲ್ಲಿಯೇ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ. ಮೂರು ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಿದರೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇದೆ.
ಯಾವ ಆರೋಪ ಹೊರಿಸಲಾಗಿದೆ:
ಸಾರ್ಜಜನಿಕರ ದಾರಿ ತಪ್ಪಿಸಲು ಯತ್ನ, ರಾಷ್ಟ್ರೀಯ ಐಕ್ಯತೆಗೆ ಧಕ್ಕೆ,