ಬೆಳಗಾವಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇತಿಹಾಸಿಕ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ನಗರದೆಲ್ಲೆಡೆ ಬುಧವಾರ ಬೆಳಗ್ಗೆಯಿಂದ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ತೀರ್ಪು ಪ್ರಕಟ ಬಳಿಕ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿರುವ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಈಗಾಗಲೇ ಎಲ್ಲಕಡೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ನಾಲ್ವರು ಎಸಿಪಿ, 19 ಮಂದಿ ಇನ್ಸಪೆಕ್ಟರ್, 24 ಜನ ಪಿಎಸ್ಐ, 75 ಜನ ಎಎಸ್ಐ, 632 ಹೆಡ್ ಕಾನ್ಸಟೇಬಲ್, 12 ಸಿಎಆರ್, ಎರಡು ಕೆಎಸ್ಆರ್ ಪಿ ತುಕಡಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
‘ಯಾವುದೇ ವದಂತಿ, ಊಹಾಪೋಹಗಳಿಗೆ ಯಾತೂ ಕಿವಿಗೊಡಬಾರದು. ತೀರ್ಪು ಏನೇ ಬಂದರೂ ಸ್ವೀಕರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂಬ ಉದ್ದೇಶದಿಂದ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹರಡಬಾರದು’ ಎಂದು ಮಹಾನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಅಭ್ಯರ್ಥಿ ಆಯ್ಕೆ ವರಿಷ್ಠರಿಗೆ ಬಿಟ್ಟದ್ದು, ಬಿಜೆಪಿ ಮಾತಿನ ಮೇಲೆ ನಿಲ್ಲುವ ಪಕ್ಷ: ಮುನಿರತ್ನ