Advertisement

ಬಾಬ್ರಿ ಮಸೀದಿ ತೀರ್ಪು ಸತ್ಯಕ್ಕೇ ಜಯ: ಡಿಸಿಎಂ ಸವದಿ ಹರ್ಷ

03:55 PM Sep 30, 2020 | Mithun PG |

ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಮತ್ತು “ಸತ್ಯಕ್ಕೇ ಜಯ” ಎಂಬ ಶ್ರೀ ರಾಮನ ಧ್ಯೇಯವಾಕ್ಯಕ್ಕೆ ಪೂರಕವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಅವರು, ಸತ್ಯ ಎಂದಿಗೂ ಸತ್ಯವೇ, ಬಿಜೆಪಿಯು ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು.  ಈಗ ನ್ಯಾಯದೇವತೆಯೂ ನಮ್ಮ ನಂಬಿಕೆಯನ್ನು ಸಾಕ್ಷಾತ್ಕರಿಸಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಮುತ್ಸದ್ಧಿ ನಾಯಕರಾದ ಶ್ರೀ ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್‍ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಮುಂತಾದವರನ್ನು ಈ ಪ್ರಕರಣದ ಷಡ್ಯಂತ್ರದಲ್ಲಿ ಸಿಲುಕಿಸುವ ದೊಡ್ಡ ರಾಜಕೀಯ ಹುನ್ನಾರವೇ ನಡೆದಿತ್ತು.  ಆದರೆ ಈ ನ್ಯಾಯನಿರ್ಣಯದಿಂದಾಗಿ ಪಟ್ಟಭದ್ರರಿಗೆ ಮುಖಭಂಗವಾಗಿದೆ.  ಈ ಎಲ್ಲಾ ಹಿರಿಯ ಮುಖಂಡರಿಗೆ ವಿನಾಕಾರಣ ಮಾನಸಿಕ ಕಿರುಕುಳ ನೀಡುವ ಉದ್ದೇಶ ಹೊಂದಿದ್ದ ಕೆಲವು ರಾಜಕೀಯ ಶಕ್ತಿಗಳಿಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯು ತಕ್ಕ ಶಾಸ್ತಿ ಮಾಡಿದೆ ಎಂದು ಸವದಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಬ್ರಿ ಪ್ರಕರಣದ ಆರೋಪಿಗಳು ಖುಲಾಸೆ; ರಾಷ್ಟ್ರೀಯವಾದಿಗಳಿಗೆ ಇಂದು ಸಂತಸದ ದಿನ: ಈಶ್ವರಪ್ಪ

ಪ್ರಾಮಾಣಿಕ ಸೇವೆ ಮತ್ತು ಆದರ್ಶ ನಡೆನುಡಿಗಳ ಉತ್ತಮ ಆಡಳಿತಕ್ಕೆ ನಮ್ಮಲ್ಲಿ “ರಾಮರಾಜ್ಯ” ಎಂದು ಕರೆಯುವುದು ರೂಢಿ.  ಅದೇರೀತಿ ಇತ್ತೀಚೆಗೆ ರಾಮಮಂದಿರದ ನಿರ್ಮಾಣಕ್ಕೆ ಅನುಮತಿ ನೀಡಿದ ಮತ್ತು ಈಗ ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿ ನೀಡಲಾದ ತೀರ್ಪುಗಳು “ರಾಮರಾಜ್ಯ”ದ ಪರಿಕಲ್ಪನೆಗೆ ಪೂರಕವಾಗಿಯೇ ಇದೆ ಎಂಬುದು ನನ್ನಂತಹ ಅನೇಕರ ಅನಿಸಿಕೆ.

Advertisement

ಪವಿತ್ರವಾದ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರವನ್ನು ನಿರ್ಮಿಸಬೇಕೆಂಬ ನಿಟ್ಟಿನಲ್ಲಿ ಅನೇಕ ಮುಖಂಡರು, ಸಾಧುಸಂತರು, ಕರಸೇವಕರು, ಶ್ರೀ ರಾಮನ ಭಕ್ತರು ಮತ್ತು ಬಿಜೆಪಿಯ ಸಮಸ್ತರೂ ಹಲವು ವರ್ಷಗಳಿಂದ ಹೋರಾಟ, ತ್ಯಾಗ ಬಲಿದಾನಗಳನ್ನು ಕೈಗೊಂಡಿದ್ದರು. ಈ ಎಲ್ಲಾ ಹೋರಾಟಗಳಿಗೆ ಈ ತೀರ್ಪಿನಿಂದಾಗಿ ಮತ್ತೊಮ್ಮೆ ಮೌಲ್ಯ ಹೆಚ್ಚಿದಂತಾಗಿದೆ. ಅತ್ಯಂತ ಸಹನೆಯಿಂದ, ಅಧ್ಯಯನಗಳಿಂದ ಈ ವಿದ್ವತ್‍ಪೂರ್ಣ ತೀರ್ಪು ಹೊರಹೊಮ್ಮಿದೆ ಎಂದು ಸವದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಾಬ್ರಿ ಪ್ರಕರಣ ಕುರಿತು ವಿಶೇಷ ನ್ಯಾಯಾಲಯ ನೀಡಿದ ತೀರ್ಪು ಐತಿಹಾಸಿಕವಾಗಿದೆ :BSY

 

Advertisement

Udayavani is now on Telegram. Click here to join our channel and stay updated with the latest news.

Next