Advertisement

ದೇಶದ ಪ್ರಬುದ್ಧ ರಾಜಕಾರಣಿಯಾಗಿದ್ದ ಬಾಬೂಜಿ; ಜಿಲ್ಲಾಧಿಕಾರಿ

06:03 PM Jul 07, 2022 | Team Udayavani |

ಚಾಮರಾಜನಗರ: ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್‌ರಾಮ್‌ ಅವರ ಕೊಡುಗೆಯನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ, ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರನಾಯಕ, ಮಾಜಿ ಉಪಪ್ರಧಾನಿ, ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್‌ ಅವರ 36ನೇ ಪುಣ್ಯಸ್ಮರಣೆಯಲ್ಲಿ ಕಾರ್ಯಕ್ರಮದ ದೀಪ ಬೆಳಗಿಸಿ, ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ದೇಶದ ಪ್ರಬುದ್ಧ ರಾಜಕಾರಣಿಯಾಗಿದ್ದ ಬಾಬೂಜಿಯವರು ಕಾನೂನು, ಆಹಾರ, ಕಾರ್ಮಿಕ ಇಲಾಖೆಗಳೂ ಸೇರಿದಂತೆ ವಿವಿಧ ಖಾತೆಗಳನ್ನು ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಸಮರ್ಪಕವಾಗಿ ನಿಭಾಯಿಸಿ ದೇಶದ ಶೋಷಿತ ವರ್ಗದವರಿಗೆ ದನಿಯಾಗಿದ್ದವರು. ಶೋಷಿತರ ದೀನ ದಲಿತರ ಕಲ್ಯಾಣಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ ಬಾಬು ಜಗಜೀವನ್‌ರಾಮ್‌ ಅವರ ಹೋರಾಟದ ಆದರ್ಶ ಗುಣಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗುಡೂರು ಭೀಮಸೇನ್‌, ಮುಖಂಡರಾದ ಅರಕಲವಾಡಿ ನಾಗೇಂದ್ರ, ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಪಟ್ಟಣ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ತಿಮ್ಮರಾಜು, ಮುಖಂಡರಾದ ಬಸವನಪುರ ರಾಜಶೇಖರ್‌, ಆಲೂರು ಮಲ್ಲು, ಚಾ.ಗು. ನಾಗರಾಜು, ಶ್ರೀಕಂಠ, ಎಂ. ಶಿವಕುಮಾರ್‌, ರಾಚಯ್ಯ, ಕರಿಯಪ್ಪ, ಗಿರಿ, ಡ್ಯಾನ್ಸ್‌ ಬಸವರಾಜು, ವೆಲ್ಡಿಂಗ್‌ ನಿಂಗರಾಜು ಇತರರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next