Advertisement

ಇಳಕಲ್ಲ ಬಸ್‌ ನಿಲ್ದಾಣದ ಶೌಚಗೃಹದಲ್ಲೇ ಜನನ! 

04:00 AM Jul 17, 2017 | Team Udayavani |

ಇಳಕಲ್ಲ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೂಲತಃ ವಿಜಯಪುರ ಜಿಲ್ಲೆಯ ಗಣಿ ಗ್ರಾಮದ ಸಿದ್ದೇಶ ನಗರದ ನಿರ್ಮಲಾ ರಾಮಲಿಂಗಪ್ಪ ಹಡಪದ ದಂಪತಿ ಕೂಲಿ ಕೆಲಸ ಮಾಡಿಕೊಂಡು ಗೋವಾದಲ್ಲಿ ನೆಲೆಸಿದ್ದಾರೆ. ನಿರ್ಮಲಾ 7 ತಿಂಗಳ ಗರ್ಭಿಣಿಯಾಗಿದ್ದು, ಹೆರಿಗೆಗಾಗಿ ತವರುಮನೆಗೆ ಬಸ್‌ನಲ್ಲಿ ಶನಿವಾರ ರಾತ್ರಿ ಪ್ರಯಾಣ ಬೆಳೆಸಿದ್ದಾರೆ. ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ನಗರಕ್ಕೆ ಬಂದಿಳಿದಿದ್ದರು. ಈ ಸಂದರ್ಭದಲ್ಲಿ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋದ ನಿರ್ಮಲಾಗೆ ಹೆರಿಗೆ ನೋವು ಕಾಣಿಸಿಕೊಂಡು, ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದಳು. ಇದನ್ನು ಗಮನಿಸಿದ ಮಹಿಳೆಯರು ಸಹಾಯಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ಆ್ಯಂಬುಲೆನ್ಸ್‌ಗೆ ಕರೆ ಮಾಡಿ, ನಂತರ ಮಗು ಮತ್ತು ತಾಯಿಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

Advertisement

ಬಳಿಕ ಬಾಣಂತಿ ಹಾಗು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next