Advertisement
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೋವಿಡ್ ಪಿಡುಗಿನ ಮೂರನೇ ಅಲೆ ಬಂದೆ ಬರುತ್ತೆ ಎಂದು ಈಗಾಗಲೆ ಆರೋಗ್ಯ ಕ್ಷೇತ್ರದ ತಜ್ಞರು ಹೇಳಿದ್ದಾರೆ ಆದ್ದರಿಂದ ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲೂ ಸರ್ಕಾರ ಈಗಿನಿಂದಲೇ ಸಕಲ ಸಿದ್ದತೆಯನ್ನ ಮಾಡಿಕೋಳ್ಳಬೇಕು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತಂಡದ ಪ್ರತಿಯೊಬ್ಬ ಮಂತ್ರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಕೋವಿಡ್ ನಿಯಂತ್ರಣ ಸಂಬಂಧ ರಚಿಸಿರುವ ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ಎಲ್ಲರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಪಿಡುಗನ್ನು ತೊಲಗಿಸಬೇಕು ಎಂದರು.
Related Articles
Advertisement
ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಮಾದರಿ ಜಿಲ್ಲೆ: ನಗರ ಪ್ರದೇಶಗಳಲ್ಲಿ ಪ್ರತಿ ವಾರ್ಡಿಗೊಂದು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದು ಟಾಸ್ಕ್ ಫೋರ್ಸ್ ಸಮಿತಿ ಮಾಡಲಾಗಿದೆ ಅಲ್ಲದೆ ಪ್ರತಿ ವಾರ್ಡ್ ಹಾಗೂ ಪ್ರತಿ ಗ್ರಾಮಕ್ಕೆ ಒಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಟಾಸ್ಕ್ ಫೋರ್ಸ್ ಸಮಿತಿಯು ಯೋಜನೆ ರೂಪಿಸಿಕೊಂಡು ತಲಾವಾರು ತಮ್ಮ ವ್ಯಾಪ್ತಿಯ ಮನೆಗಳನ್ನು ಹಂಚಿಕೊಂಡು ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಸೇವೆ ಹಾಗೂ ಮಾಹಿತಿ ಒದಗಿಸುತ್ತಿದ್ದಾರೆ ದಾಖಲಾಗಿರುವ ಕೋವಿಡ್ ಪ್ರಕರಣಗಳು ಎಷ್ಟು, ಸಕ್ರಿಯ ಪ್ರಕರಣಗಳು ಎಷ್ಟು ಎಂಬ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದಾರೆ ಕೋವಿಡ್ ಸೋಂಕು ತಗುಲಿದವರ ಸಂಪರ್ಕಕ್ಕೆ ಬಂದ ಸಂಪರ್ಕಿತರನ್ನು ಪತ್ತೆಹಚ್ಚಿ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳುತ್ತಿದ್ದಾರೆ ಸಮಿತಿಯಲ್ಲಿ ಶಾಲಾ ಶಿಕ್ಷಕರು, ಆಶಾ ಕರ್ತೆಯರು, ಅಂಗನವಾಡಿ ಶಿಕ್ಷಕರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸಹಾಯಕರು/ ಸಿಬ್ಬಂದಿಗಳನ್ನು ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ ಈ ಎಲ್ಲಾ ಕ್ರಮಗಳ ಹಿನ್ನಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ 5ನೇ ಸ್ಥಾನದಲ್ಲಿದೆ ಎಂದರು.
ಜನತಾ ಕಫ್ರ್ಯೂ ಇರುವುದರಿಂದ ಎಷ್ಟೋ ಕಾರ್ಮಿಕರಿಗೆ ಕೆಲಸವಿಲ್ಲ ನಿರುದ್ಯೋಗ ಮತ್ತು ಬಡತನ ಜಾಸ್ತಿಯಾಗಿದೆ ಆದ್ದರಿಂದ ಇಂದಿರಾ ಕ್ಯಾಂಟೀನ್ ಮುಂದುವರಿಸಿ ಜನರಿಗೆ ಆಹಾರದ ಪೊಟ್ಟಣ ನೀಡಬೇಕು ಜಿಲ್ಲೆಯಲ್ಲಿ ಕೋವಿಡ್ ಸೊಂಕು ಹರಡದಂತೆ ತಡೆಯುವ ಕ್ರಮಗಳ ಉಪಯೋಗಕ್ಕಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ 25 ಲಕ್ಷಗಳನ್ನು ಬಳಸಿಕೊಳ್ಳುವಂತೆ ಲಿಖಿತ ಮನವಿಯನ್ನು ಅಪರ ಜಿಲ್ಲಾಧಿಕಾರಿಗಳಿಗೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಎಚ್.ಅಮರೇಶ್ ಅವರು ಉಪಸ್ಥಿತರಿದ್ದರು.