Advertisement
ಮಂಗಳೂರು ನಗರ ಪೊಲೀಸರು ಗುರುವಾರ ಬೆಳಗ್ಗಿನ ಜಾವ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದಾಗ 25 ಮೊಬೈಲ್, ಬ್ಲೂಟೂತ್, ಪೆನ್‌ಡ್ರೈವ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಡಿಐಜಿ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅಧಿಕಾರಿ, ಸಿಬಂದಿಯ ವಿಚಾರಣೆ ನಡೆಸಿದ್ದಾರೆ.
ಕಾರಾಗೃಹದಲ್ಲಿ ಈಗ ಇರುವ ಭದ್ರತೆಯನ್ನು ಹೆಚ್ಚಿಸುವ ಬಗ್ಗೆಯೂ ಡಿಐಜಿ ಚರ್ಚೆ ನಡೆಸಿದ್ದಾರೆ. ಕಾರಾಗೃಹದಲ್ಲಿ ಮೊಬೈಲ್ ಜಾಮರ್, ಕೈಗಾರಿಕ ಭದ್ರತಾ ಪಡೆಯವರ ತಪಾಸಣೆ, ಸ್ಕ್ಯಾನರ್ ಮೊದಲಾದವುಗಳಿದ್ದರೂ ನಿಷೇಧಿತ ವಸ್ತುಗಳು ಕಾರಾಗೃಹದೊಳಗೆ ಹೋಗಿರುವ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಘಟನೆ
ಜಿಲ್ಲಾ ಕಾರಾಗೃಹದಲ್ಲಿ ಈ ಹಿಂದೆಯೂ ಡ್ರಗ್ಸ್ ಪತ್ತೆಯಾಗಿತ್ತು. ಓರ್ವ ಸಿಬಂದಿಯನ್ನು ಅಮಾನತು ಮಾಡಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಕೈದಿಯ ಭೇಟಿಗೆ ಬಂದಿದ್ದ ಓರ್ವನ ಬಳಿ ಗಾಂಜಾ ಪತ್ತೆಯಾಗಿತ್ತು. ಇತ್ತೀಚೆಗೆ ವಿಚಾರಣಾಧೀನ ಕೈದಿಗಳ ನಡುವೆ ಹೊಡೆದಾಟ ಸಂಭವಿಸಿತ್ತು.