Advertisement
ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಸಂಬಂಧ ಯಾವುದೇ ಪರಿಸ್ಥಿತಿ ಎದುರಿಸಲು ಅಲ್ಲಿನ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿದೆ.
ಕೇರಳದ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಜಿಲ್ಲಾಡಳಿ ತಕ್ಕೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಮಾಲೋಚಿಸಿದ ಸಚಿವರು, ಪ್ರಸ್ತುತ ಪರಿಸ್ಥಿತಿ ಬಗ್ಗೆ ಸಮಗ್ರ ಮಾಹಿತಿ ಪಡೆದರು. ಕೇರಳದಲ್ಲಿ ರೂಪಾಂ ತರಿ ಕೊರೊನಾ ಪತ್ತೆಯಾಗಿರುವ ಹಿನ್ನೆಲೆ ಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ಆರೋಗ್ಯ ಇಲಾಖೆ ಸನ್ನದ್ಧವಾಗಿದ್ದು, ಎಲ್ಲ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರ ಬೇಕು. ಕೊರೊನಾ ಪ್ರಕರಣಗಳು ಕಂಡು ಬಂದಲ್ಲಿ ನಿಯಮಾನುಸಾರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಮೈಸೂರು ಜಿಲ್ಲಾ ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಕೇಸ್‌ಗಳು ದಾಖಲಾಗಿಲ್ಲ. ಆರೋಗ್ಯ ಸಚಿ ವರು ಈಗಾಗಲೇ ಸಭೆ ನಡೆಸಿದ್ದಾರೆ. ಸಾರ್ವಜನಿಕರು ಆರೋಗ್ಯ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಬೇಕಿದೆ ಎಂದು ಹೇಳಿದ್ದಾರೆ.
Related Articles
ರಾಜ್ಯ ಸರಕಾರದ ಮಾರ್ಗಸೂಚಿ ಬಂದ ಬಳಿಕ ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಚಿದಂಬರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಡಿ. 19ರಂದು ಅಧಿಕಾರಿಗಳ ಸಭೆ ನಡೆಯಲಿದೆ. ಆ ಸಭೆಯಲ್ಲಿ, ಮಾರ್ಗಸೂಚಿಗಳು, ಗಡಿಯಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಉನ್ನತ ಮಟ್ಟದ ಅಧಿಕಾರಿಗಳು ಕೈಗೊಳ್ಳುತ್ತಾರೆ. ಆ ಮಾರ್ಗಸೂಚಿಗಳನ್ನು ನಾವು ಅನುಷ್ಠಾನಗೊಳಿಸುವುದಾಗಿ ಡಾ| ಚಿದಂಬರ ಉದಯವಾಣಿಗೆ ತಿಳಿಸಿದರು.
Advertisement
ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಸಿದ್ಧ: ಸಿಎಂಹುಬ್ಬಳ್ಳಿ: ಕೋವಿಡ್ ಪ್ರಕರಣಗಳ ಬಗ್ಗೆ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು, ಅಧಿಕಾರಿಗಳೊಂದಿಗೆ ಸಭೆ ಮಾಡುವಂತೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿ, ಸಚಿವರು ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದಾರೆ. ನಿಯಂತ್ರಣಕ್ಕೆ ಬೇಕಾದ ಕ್ರಮ ಕೈಗೊಳ್ಳಲಾಗುವುದು. ನಾನು ಕೂಡ ತಜ್ಞರ ಜತೆ ಮಾತನಾಡುತ್ತೇನೆ. ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.