Advertisement
ನಗರಸಭೆಯಿಂದ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್‌ಹಾಗೂ ಕಟೌಟ್‌ಗಳನ್ನು ತೆರವುಗೊಳಿಸಲಾಯಿತು.
ಹಿಂದೂ ಸಮಾಜೋತ್ಸವದ ಬ್ಯಾನರ್‌ಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಅರುಣ್ ಕೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದಿನಂತೆ ಸಮಾಜೋತ್ಸವ ನಡೆಯುವ ಸಂದರ್ಭದಲ್ಲಿ ನಗರದಲ್ಲಿ ಬ್ಯಾನರ್ ಅಳವಡಿಕೆ, ಅಲಂಕಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಎಸ್ಪಿಯವರಿಗೆ ಮನವಿ ಮಾಡಿದ್ದೇವೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಭರವಸೆ ನೀಡಿದ್ದಾರೆ ಎಂದರು.