Advertisement

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ಸೌಲಭ್ಯ: ಅವಧಿ ವಿಸ್ತರಣೆ

11:57 PM Oct 20, 2024 | Team Udayavani |

ಮಂಗಳೂರು: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್‌ ಅನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.

Advertisement

ಮೆಟ್ರಿಕ್‌ ಅನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಕ್ಕೆ ಅರ್ಹರು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ www.ssp.postmatric.karnataka.gov.in, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂ ಧಿಸಿದ ಸರಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್‌ ವಿಳಾಸ : www.bcwd.karnataka.gov.in/ , bcwdhelpline@gmail.com, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್‌: postmatrichelp@karnataka.gov.in ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next