Advertisement
ಗುರುವಾರ ಬೆಂಗಳೂರಿನ ಯಶವಂತಪುರ ಎಪಿಎಂಸಿ ತರಕಾರಿ ಮಾರುಟ್ಟೆಯಲ್ಲಿ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು. ಬಡ ಬೀದಿ ಬದಿ ವ್ಯಾಪಾರಿಗಳು ಪ್ರತಿ ದಿನದ ವ್ಯವಹಾರಕ್ಕಾಗಿ ಲೇವಾದೇವಿಗಾರರ ಮೇಲೆ ಅವಲಂಬಿತರಾಗುವ ಹಾಗೂ ಅಧಿಕ ಬಡ್ಡಿ ವಿಧಿಸಿ ವಂಚಿಸುವನ್ನು ತಡೆಯುವ ಉದ್ದೇಶದಿಂದ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ಬೀದಿ ಬದಿಯ ವ್ಯಾಪಾರಿಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಗುರುತಿನ ಚೀಟಿ ನೀಡಲಾಗುತ್ತಿದ್ದು, ವಿವಿಧ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1.80 ಲಕ್ಷ, ಬಿಬಿಎಂಪಿ ವ್ಯಾಪ್ತಿಯಲ್ಲಿ 24,650 ಮಂದಿ ಗುರುತಿನ ಚೀಟಿ ಪಡೆದುಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 5 ಸಾವಿರ, ಉಳಿದ ಮಹಾನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 3 ಸಾವಿರ ಹಾಗೂ ಜಿಲ್ಲಾ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ತಲಾ ಒಂದು ಸಾವಿರ ಫಲಾನುಭವಿಗಳಿಗೆ 2 ಸಾವಿರ ರೂಪಾಯಿಯಿಂದ 10 ಸಾವಿರವರೆಗೆ ಸಾಲ ನೀಡಲಾಗುವುದು. ಬಿಪಿಎಲ್ ಕಾರ್ಡ್ ಬೇಕು
ಈ ಸೌಲಭ್ಯ ಪಡೆಯಲು ವ್ಯಾಪಾರಿಗಳು ಬಿಪಿಎಲ್ ಕಾರ್ಡ್ ಹೊಂದಿರುವುದು ಕಡ್ಡಾಯ. ಈ ಯೋಜನೆ ಅಡಿಯಲ್ಲಿ ಸಹಕಾರಿ ಬ್ಯಾಂಕ್‌ಗಳು ತಮ್ಮ ವ್ಯಾಪ್ತಿಯಲ್ಲಿನ ನಗರ ಪ್ರದೇಶದಲ್ಲಿ ನಿಗದಿ ಪಡಿಸಿದ ಗುರಿಗೆ ತಕ್ಕಂತೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮೊದಲು ಆದ್ಯತೆ ನೀಡಿ ವಿತರಿಸಲು ಸೂಚನೆ ನೀಡಲಾಗಿದೆ. ಈ ಯೋಜನೆ ಪ್ರಕಾರ ಸಹಕಾರ ಬ್ಯಾಂಕಿನ ಮೂಲಕ ಮಾತ್ರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಪ್ರತಿ ನಗರ ಪ್ರದೇಶಕ್ಕೆ ಒಂದು ಸಹಕಾರ ಬ್ಯಾಂಕ್ ಮತ್ತು ಮೊಬೈಲ್ ಬ್ಯಾಂಕಿಂಗ್ ಘಟಕಕ್ಕಾಗಿ ಸ್ಥಳ ಗುರುತಿಸುವ ಜವಾಬ್ದಾರಿಯನ್ನು ಡಿಸಿಸಿ ಬ್ಯಾಂಕಿನ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ.
Related Articles
ನೋಂದಾಯಿತ ಬೀದಿ ಬದಿ ವ್ಯಾಪಾರಿಗಳು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ತಾವು ವ್ಯಾಪಾರ ನಡೆಸುತ್ತಿರುವ ಸ್ಥಳದ ಫೋಟೊ, ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ, ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯಬೇಕು. ಸಾಲದ ಮರು ಪಾವತಿಯ ಅವಧಿ ಮೂರು ತಿಂಗಳಾಗಿದ್ದು, ನಿಗದಿತ ಅವಧಿಯೊಳಗೆ ಸಾಲ ಮರು ಪಾವತಿ ಮಾಡಿದರೆ, ಮತ್ತೆ ಶೇ. 10 ರಷ್ಟು ಹೆಚ್ಚು ಸಾಲ ನೀಡಲು ಅವಕಾಶ ಕಲ್ಪಿಸಲಾಗಿದೆ.
Advertisement
ಯಾರಿಗೆಲ್ಲಾ ಸೌಲಭ್ಯ– ರಸ್ತೆ ಬದಿಯಲ್ಲಿ ತಳ್ಳುವ ಬಂಡಿ ಅಥವಾ ಮೋಟಾರು ವಾಹನಗಳಲ್ಲಿ ಪಾನೀಯ, ತಿಂಡಿ, ಊಟ ಮತ್ತಿತರ ಹೋಟೆಲ್ ಸೇವೆ ಒದಗಿಸುವವರು
– ಬೀದಿಗಳಲ್ಲಿ ಹಣ್ಣು, ತರಕಾರಿ, ಹೂ, ಬುಟ್ಟಿ ಮತ್ತಿತರ ಪರಿಕರಗಳ ಮಾರಾಟ ಮಾಡುವವರು
– ಪಾದರಕ್ಷೆ, ಚರ್ಮದ ಉತ್ಪನ್ನಗಳನ್ನು ರಿಪೇರಿ ಹಾಗೂ ಮಾರಾಟ ಮಾಡುವವರು
– ಆಟದ ಸಾಮಾನು, ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವವರು ಯಾರಿಗೆ ಸಿಗಲ್ಲ?
– ರಸ್ತೆ ಬದಿಯಲ್ಲಿ ಸ್ವತ್ಛತೆಯನ್ನು ಹಾಳು ಮಾಡುವ, ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಮಾರಾಟ ಮಾಡುವವರಿಗೆ ಈ ಯೋಜನೆಯ ಸೌಲಭ್ಯ ಸಿಗಲ್ಲ.
4.50 ಲಕ್ಷ – ರಾಜ್ಯದಲ್ಲಿನ ಬೀದಿ ವ್ಯಾಪಾರಿಗಳ ಸಂಖ್ಯೆ
80 ಸಾವಿರ – ಬಿಬಿಎಂಪಿ ವ್ಯಾಪ್ತಿಯಲ್ಲಿನ ಬೀದಿ ವ್ಯಾಪಾರಿಗಳು
53 ಸಾವಿರ – ಈ ವರ್ಷ ಸೌಲಭ್ಯ ಪಡೆಯುವ ಫಲಾನುಭವಿಗಳು