Advertisement

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

12:56 AM Oct 11, 2024 | Team Udayavani |

ಬದಿಯಡ್ಕ: ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಫ್‌ಐ ನೇತಾರೆ, ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ ವಿರುದ್ಧ ಬದಿಯಡ್ಕ ಪೊಲೀಸರು ಇನ್ನೊಂದು ಕೇಸು ದಾಖಲಿಸಿಕೊಂಡಿದ್ದಾರೆ.

Advertisement

ಪಳ್ಳತ್ತಡ್ಕ ಬಳಿಯ ಬಳ್ಳಂಬೆಟ್ಟಿನ ಶ್ವೇತಾ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ. ವಿದ್ಯಾನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಸಚಿತಾ ರೈ 2.50 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ಶ್ವೇತಾ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಸಚಿತಾ ರೈ ವಿರುದ್ಧ ಒಟ್ಟು ದಾಖಲಿಸಿದ ಕೇಸುಗಳ ಸಂಖ್ಯೆ ಮೂರಕ್ಕೇರಿದೆ.

ಕುಂಬಳೆ ಹಾಗೂ ಬದಿಯಡ್ಕ ಪೊಲೀಸ್‌ ಠಾಣೆಗಳಲ್ಲಿ ತಲಾ ಒಂದೊಂದು ಕೇಸುಗಳನ್ನು ಈ ಮೊದಲೇ ದಾಖಲಿಸ ಲಾಗಿದೆ. ಕಿದೂರು ಪಾದೆಕಲ್ಲು ನಿವಾಸಿ ನಿಶ್ಮಿತಾ ಶೆಟ್ಟಿ ನೀಡಿದ ದೂರಿ ನಂತೆ ಕುಂಬಳೆ ಪೊಲೀಸರು, ಬಾಡೂರು ನಿವಾಸಿ ಮಲ್ಲೇಶ್‌ (34) ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಈಗಾಗಲೇ ಕೇಸು ದಾಖಲಿಸಿಕೊಂಡಿದ್ದಾರೆ.

ಸಿಪಿಎಂನಿಂದ ಸಚಿತಾ ರೈ ವಜಾ
ಉದ್ಯೋಗ ಭರವಸೆ ನೀಡಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಆರೋಪಿ ಸಚಿತಾ ರೈಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿದೆ ಎಂದು ಸಿಪಿಎಂ ಕುಂಬಳೆ ಏರಿಯಾ ಕಾರ್ಯದರ್ಶಿ ಸಿ.ಎ. ಸುಬೈರ್‌ ತಿಳಿಸಿದ್ದಾರೆ.

ಗುತ್ತಿಗೆದಾರನ ಮೃತದೇಹ ಪತ್ತೆ
ಉಪ್ಪಳ: ನಿಗೂಢವಾಗಿ ನಾಪತ್ತೆಯಾಗಿದ್ದ ಗುತ್ತಿಗೆದಾರ ಉಪ್ಪಳ ಮಣ್ಣಂಗುಳಿ ನಿವಾಸಿ ಇಬ್ರಾಹಿಂ ಅವರ ಪುತ್ರ ಶರೀಫ್‌ (32) ಅವರ ಮೃತದೇಹ ಶಿರಿಯ ಹೊಳೆಯಲ್ಲಿ ಪತ್ತೆಯಾಗಿದೆ.

Advertisement

ಅ. 8ರಂದು ಸಂಜೆ ಸ್ಕೂಟರ್‌ನಲ್ಲಿ ಮನೆಯಿಂದ ಹೊರಗೆ ಹೋಗಿದ್ದರು. ಆ ಬಳಿಕ ಮನೆಗೆ ವಾಪಸಾಗಿಲ್ಲ. ಅವರಿಗಾಗಿ ವಿವಿಧೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ರಾಹಿಂ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಇದೇ ವೇಳೆ ಅವರ ಸ್ಕೂಟರ್‌ ಶಿರಿಯ ಸೇತುವೆ ಬಳಿ ಪತ್ತೆಯಾಗಿತ್ತು. ಸ್ಕೂಟರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next